ಭಾನುವಾರ, ಆಗಸ್ಟ್ 9, 2020
22 °C

ಭಾರತ–ಚೀನಾ ಗಡಿ ಬಿಕ್ಕಟ್ಟು | ಮೊಲ್ಡೊದಲ್ಲಿ ಇಂದು ಕಮಾಂಡರ್ ಮಟ್ಟದ ಸಭೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಇರುವ ಚೀನಾದ ಮೊಲ್ಡೊದಲ್ಲಿ ಇಂದು ಭಾರತ–ಚೀನಾ ಸೇನೆಯ ಕಮಾಂಡರ್‌ ಮಟ್ಟದ ಸಭೆಯು ನಡೆಯಲಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಬೆಳಿಗ್ಗೆ 11 ಗಂಟೆಗೆ ಸಮಯ ನಿಗದಿಯಾಗಿದೆ. ಸದ್ಯ ಗಡಿ ಬಿಕ್ಕಟ್ಟು ಸೃಷ್ಟಿಯಾಗಿರುವ ಪ್ರದೇಶದಿಂದ ಚೀನಾ ಸೇನೆಯು ಸಂಪೂರ್ಣ ವಾಪಸ್‌ ಹೋಗುವಂತೆ ನೋಡಿಕೊಳ್ಳುವುದು ಭಾರತದ ಉದ್ದೇಶವಾಗಿದೆ ಎನ್ನಲಾಗಿದೆ.

‘ಪೂರ್ವ ಲಡಾಕ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ ನಿಯೋಜಿಸಲಾಗಿರುವ ಸೇನೆಯನ್ನು ಹಿಂಪಡೆಯುವ ಕಾರ್ಯ ಪ್ರಗತಿಯಲ್ಲಿದೆ. ಅದರೆ, ಇನ್ನೂ ಪೂರ್ಣಗೊಂಡಿಲ್ಲ. ಚೀನಾ ಕಡೆಯವರು ಸೇನೆಯನ್ನು ಹಿಂಪಡೆಯಲಿದ್ದಾರೆ, ಬಿಕಟ್ಟು ನಿವಾರಿಸಲು ಪ್ರಾಮಾಣಿಕವಾಗಿ ಶ್ರಮಿಸಲಿದ್ದಾರೆ ಹಾಗೂ ಗಡಿಯಲ್ಲಿ ಶಾಂತಿ, ನೆಮ್ಮದಿ ಪುನಃ ಸ್ಥಾಪನೆಯಾಗಲಿದೆ ಎಂದು ನಿರೀಕ್ಷಿಸಿದ್ದೇವೆ’ ಎಂದು ಭಾರತ ಗುರುವಾರ ಹೇಳಿಕೆ ನೀಡಿತ್ತು.

ಭಾರತ ಹಾಗೂ ಚೀನಾದ ಸೇನೆಗಳು ಮೇ ತಿಂಗಳಿನಿಂದ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಬೀಡುಬಿಟ್ಟಿವೆ. ಜೂನ್‌ 15 ರಂದು ಗಾಲ್ವನ್‌ ಕಣಿವೆಯಲ್ಲಿ ನಡೆದ ಸಂಘರ್ಷದ ಬಳಿಕ ಗಡಿಯುದ್ದಕ್ಕೂ ಉದ್ವಿಗ್ನತೆ ಉಲ್ಬಣಗೊಂಡಿದೆ.

ಈ ಬಿಕ್ಕಟ್ಟನ್ನು ಪರಿಹರಿಸಲು ಉಭಯ ದೇಶಗಳು ಹಲವು ಬಾರಿ ಸೇನೆ ಮತ್ತು ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು