ಭಾನುವಾರ, ಜುಲೈ 25, 2021
28 °C

ಗಡಿ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ರಾಜನಾಥ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ‘ಗಡಿ ರಸ್ತೆಗಳ ಸಂಸ್ಥೆ’ (ಬಿಆರ್‌ಒ) ಕೈಗೊಂಡಿರುವ ಮೂಲಸೌಕರ್ಯ ಯೋಜನೆಗಳ ಪ್ರಗತಿಯ ಪರಾಮರ್ಶೆ ನಡೆಸಿದರು.

ಬಿಆರ್‌ಒ ಮಹಾ ನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ಹರ್ಪಾಲ್ ಸಿಂಗ್, ಅರುಣಾಚಲ ಪ್ರದೇಶ ಸರ್ಕಾರದ ಮುಖ್ಯಕಾರ್ಯದರ್ಶಿ ನರೇಶ್ ಕುಮಾರ್ ಹಾಗೂ ನಾಲ್ಕು ಯೋಜನೆಗಳ ಮುಖ್ಯ ಎಂಜಿನಿಯರ್‌ಗಳು ವಿಡಿಯೊ ಸಂವಾದದಲ್ಲಿ ಭಾಗಿಯಾಗಿದ್ದರು. ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಕಾಮಗಾರಿಗಳ ಪ್ರಗತಿಯನ್ನು ತಿಳಿಯುವುದು ಸಭೆಯ ಉದ್ದೇಶವಾಗಿತ್ತು. 

ಭೂಸ್ವಾಧೀನ, ಅರಣ್ಯ ಇಲಾಖೆ ಅನುಮೋದನೆ, ಕ್ವಾರಿಗಳ ಹಂಚಿಕೆ, ಜಂಟಿ ಸಮೀಕ್ಷೆ ಮೊದಲಾದ ವಿಷಯಗಳು ಚರ್ಚೆಗೆ ಬಂದವು. ಪ್ರತಿ ಯೋಜನೆ ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಪಡಿಸಲಾಯಿತು. ಗಡಿರಸ್ತೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸರ್ಕಾರದ ಎಲ್ಲ ಇಲಾಖೆಗಳು ಸಹಕಾರ ನೀಡಲಿವೆ ಎಂದು ಮುಖ್ಯಕಾರ್ಯದರ್ಶಿ ಅವರು ಸಭೆಯಲ್ಲಿ ಭರವಸೆ ನೀಡಿದರು. ಸಭೆ ಫಲಪ್ರದವಾಗಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು