ಶನಿವಾರ, ಸೆಪ್ಟೆಂಬರ್ 26, 2020
23 °C
ಆ. 14ರಂದು ಅಧಿವೇಶನ * ಮತ್ತೆ ಚುರುಕುಗೊಂಡ ರಾಜಕೀಯ ಚಟುವಟಿಕೆ

ಕೊನೆ ಇಲ್ಲದ ಹೋಟೆಲ್‌ ವಾಸ್ತವ್ಯ: ಗೆಹ್ಲೋಟ್‌ ನಿಷ್ಠರು ಜೈಸಲ್ಮೇರ್‌ಗೆ ಸ್ಥಳಾಂತರ?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ವಿಧಾನಸಭೆ ಅಧಿವೇಶನ ನಡೆಸಲು ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅನುಮತಿ ನೀಡಿರುವ ಬೆನ್ನಲ್ಲೇ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರ ನಿಷ್ಠ ಶಾಸಕರನ್ನು ಜೈಪುರ ಹೋಟೆಲ್‌ನಿಂದ ಜೈಸಲ್ಮೇರ್‌ನಲ್ಲಿರುವ ಹೋಟೆಲ್‌ಗೆ ಶುಕ್ರವಾರ ಸ್ಥಳಾಂತರಿಸಲು ಮುಖಂಡರು ಮುಂದಾಗಿದ್ದಾರೆ. ಆದರೆ, ಶಾಸಕರನ್ನು ಸ್ಥಳಾಂತರಿಲು ಕಾರಣ ಏನು ಎಂಬುದನ್ನು ಮೂಲಗಳು ಸ್ಪಷ್ಟಪಡಿಸಿಲ್ಲ.

ಶಾಸಕರನ್ನು ಸದ್ಯ ಜೈಪುರ–ದೆಹಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಐಷಾರಾಮಿ ಹೋಟೆಲ್‌ನಲ್ಲಿ ಇರಿಸಲಾಗಿದೆ. ಅಲ್ಲಿಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಗೆಹ್ಲೋಟ್‌ ಅವರು ಶಾಸಕರನ್ನು ಉದ್ದೇಶಿಸಿ ಮಾತನಾಡುವರು. ನಂತರ ಎಲ್ಲರನ್ನು ಜೈಸಲ್ಮೇರ್‌ನ ಹೋಟೆಲ್‌ಗೆ ಸ್ಥಳಾಂತರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸಚಿನ್‌ ಪೈಲಟ್‌ ಹಾಗೂ 18 ಜನ ಶಾಸಕರು ಬಂಡಾಯದ ಬಾವುಟ ಹಾರಿಸಿದ ನಂತರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಯಿತು. ಹೀಗಾಗಿ ಜುಲೈ 13ರಂದು ಶಾಸಕರು ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು