ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂನ 30 ಜಿಲ್ಲೆಗಳಲ್ಲಿ ಭೀಕರ ಪ್ರವಾಹ; 76 ಮಂದಿ ಸಾವು

Last Updated 18 ಜುಲೈ 2020, 8:37 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನ 30 ಜಿಲ್ಲೆಗಳಲ್ಲಿ ಮಳೆ ಮುಂದುವರೆದದ್ದು, ಭೀಕರ ಪ್ರವಾಹ ಉಂಟಾಗಿದೆ. ಇದರಿಂದ 53,99,017 ಜನರು ಬಾಧಿತರಾಗಿದ್ದಾರೆ.

ನೆರೆಯಿಂದಾಗಿ76, ಭೂ ಕುಸಿತದಿಂದ 26 ಮಂದಿಸಾವಿಗೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಜಿಲ್ಲಾಡಳಿತದ ನೆರವಿನೊಂದಿಗೆ ರಾಜ್ಯ ವಿಪತ್ತು ದಳದ ಸಿಬ್ಬಂದಿ 2,389 ಜನರನ್ನು ರಕ್ಷಿಸಲಾಗಿದೆ.

ಪ್ರಸ್ತುತ ಅಸ್ಸಾಂನ 3,014 ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿದ್ದು, 1,27,955,33 ಹೆಕ್ಟೇರ್‌ ಕೃಷಿ ಭೂಮಿ ನೀರಿನಿಂದ ಜಲಾವೃತಗೊಂಡಿದೆ. 487 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1.25 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.

ರಾಷ್ಟ್ರೀಯ ಉದ್ಯಾನ ಜಲಾವೃತ: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮುಳುಗಡೆಯಾಗಿದ್ದು, 76 ಪ್ರಾಣಿಗಳು ಮೃತಪಟ್ಟಿವೆ. 170 ಪ್ರಾಣಿಗಳನ್ನು ರಕ್ಷಿಸಲಾಗಿದೆ. ಖಡ್ಗಮೃಗಗಳ ಮುಖ್ಯ ಆವಾಸ ಸ್ಥಾನ ಎನಿಸಿರುವ ಉದ್ಯಾನದಲ್ಲಿ ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿವೆ. ರಾಜ್ಯದಲ್ಲಿ ಪ್ರವಾಹವು ಈ ಬಾರಿ ಅತಿಹೆಚ್ಚು ಹಾನಿ ಉಂಟುಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT