ಮಂಗಳವಾರ, ಆಗಸ್ಟ್ 3, 2021
23 °C

ಅಸ್ಸಾಂ ರಾಜಭವನ ಪ್ರದೇಶ ಕಂಟೈನ್‌ಮೆಂಟ್ ವಲಯವೆಂದು ಘೋಷಣೆ: ಸೀಲ್‌ಡೌನ್‌ಗೆ ಸೂಚನೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಗುವಾಹಟಿ: ಅಸ್ಸಾಂನ ರಾಜಭವನ ಕ್ಯಾಂಪಸ್‌ನಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆ, ಈ ಪ್ರದೇಶವನ್ನು ಕಂಟೈನ್‌ಮೆಂಟ್‌ ವಲಯ ಎಂದು ಘೋಷಿಸಲಾಗಿದೆ.

ರಾಜಭವನ ಪ್ರದೇಶವನ್ನು ಕಂಟೈನ್‌ಮೆಂಟ್‌ ಝೋನ್‌ ಎಂದು ಘೋಷಿಸಿರುವುದಾಗಿ ಕಾಮ‌ರೂಪ್‌ ಮೆಟ್ರೋಪಾಲಿಟಿನ್‌ ಜಿಲ್ಲಾಧಿಕಾರಿ ಬಿಸ್ವಜಿತ್ ಪೆಗು ಆದೇಶ ಹೊರಡಿಸಿದ್ದಾರೆ. ತಕ್ಷಣವೇ ಈ ಪ್ರದೇಶವನ್ನು ಸೀಲ್‌ಡೌನ್ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌

ಉತ್ತರದಲ್ಲಿ ಹೋಟೆಲ್‌ ಬೆಲ್ಲೆ ವ್ಹೀವ್‌ ಬಳಿಯಿಂದ ದಕ್ಷಿಣದಲ್ಲಿ ಬೊಂಕ್ವಾರ್‌‌ ನಗರದವರೆಗೆ ಹಾಗೂ ಪೂರ್ವದಲ್ಲಿ ಬೊರ್ಥಾಕುರ್‌ನಿಂದ ಪಶ್ಚಿಮದಲ್ಲಿ ಮಹಾತ್ಮಗಾಂಧಿ ರಸ್ತೆವರೆಗೆ ಕಂಟೈನ್‌ಮೆಂಟ್‌ ವಲಯ ಎಂದು ಗುರುತಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಜುಲೈ 4ರ ವರೆಗೆ ಅಸ್ಸಾಂನಲ್ಲಿ ಇದುವರೆಗೆ 9,673 ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ, ಇದರಲ್ಲಿ 6,349 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಇನ್ನೂ 3,310 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು