ಶುಕ್ರವಾರ, ಜುಲೈ 30, 2021
25 °C

ಅಸ್ಸಾಂನ 23 ಜಿಲ್ಲೆಗಳಲ್ಲಿ ಭೀಕರ ಪ್ರವಾಹ: 34 ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಗುವಾಹಟಿ: ಅಸ್ಸಾಂನ 22 ಜಿಲ್ಲೆಗಳಲ್ಲಿ ಮಳೆ ಮುಂದುವರೆದದ್ದು, ಬ್ರಹ್ಮಪುತ್ರ ನದಿ ಪಾತ್ರದಲ್ಲಿ ಭೀಕರ ಪ್ರವಾಹ ತಲೆದೋರಿದೆ. ಇದರಿಂದ 16,03,255 ಜನರು ಬಾಧಿತರಾಗಿದ್ದು, ನೆರೆಯಿಂದ ಸಾವಗೀಡಾದವರ ಸಂಖ್ಯೆ 34ಕ್ಕೆ ತಲುಪಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. 

ನೆರೆಯ ಹಿನ್ನೆಲೆಯಲ್ಲಿ ಸೂರು ಕಳೆದುಕೊಂಡ ಸುಮಾರು 12,597 ಜನರಿಗೆ 163 ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ.
 
ದಕ್ಷಿಣ ಅಸ್ಸಾಂನಲ್ಲಿ ಮಂಗಳವಾರ ನಸುಕಿನ ಜಾವ ಉಂಟಾದ ಭೂಕುಸಿತದಿಂದಾಗಿ ಮಕ್ಕಳು ಸೇರಿದಂತೆ 20 ಜನರು ಮೃತಪಟ್ಟಿದ್ದರು. ಕಛಾರ್ ಜಿಲ್ಲೆಯ ಕೋಲಾಪುರ್ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಾವಿಗೀಡಾಗಿದ್ದರು.

ಬ್ರಹ್ಮಪುತ್ರ ನದಿ ಪಾತ್ರದಲ್ಲಿ ಅಪಾಯಮಟ್ಟ ಮೀರಿ ನೀರು ಹರಿಯುತ್ತಿದ್ದರೂ ಈ ಪ್ರದೇಶಕ್ಕೆ ಸರ್ಕಾರದ ಯಾವುದೇ ಪ್ರತಿನಿಧಿ ಭೇಟಿ ನೀಡಿ ಪರೀಕ್ಷಿಸಿಲ್ಲ. ಈ ಸಂದರ್ಭದಲ್ಲಿ ಸರ್ಕಾರವು ನಮಗೆ ಸಹಾಯ ಮಾಡಬೇಕು ಮತ್ತು ಪರಿಹಾರವನ್ನು ನೀಡಬೇಕು. ಇಲ್ಲಿ ಪರಿಸ್ಥಿತಿ  ತುಂಬಾ ಆತಂಕಕಾಗಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದನ್ನು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು