ಅಯೋಧ್ಯೆ:ರಾಮ ಮಂದಿರ ನಿರ್ಮಾಣ ಸ್ಥಳದಲ್ಲಿ ಆಗಸ್ಟ್ 5ರಂದು ಭೂಮಿ ಪೂಜೆ ನೆರವೇರಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರುಅಯೋಧ್ಯೆಯಲ್ಲಿ ಭೂಮಿ ಪೂಜೆ ನೆರವೇರಿಸಿ,ರಾಮಮಂದಿರಕ್ಕೆ ಅಡಿಗಲ್ಲು ಹಾಕಲಿದ್ದಾರೆ. ನಂತರ ದೇವಾಲಯದ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

ರಾಮ ಮಂದಿರಕ್ಕಾಗಿ ನಡೆದ ಹೋರಾಟದೊಂದಿಗೆ ನಿಕಟ ಸಂಬಂಧ ಹೊಂದಿರುವ ಬಿಜೆಪಿ ಹಿರಿಯ ನಾಯಕ ವಿನಯ್ ಕಟಿಯಾರ್ ಅವರು, ‘ದೇವಾಲಯದ ಭೂಮಿ ಪೂಜೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5ರಂದು ಅಯೋಧ್ಯೆಗೆ ಆಗಮಿಸಲಿದ್ದು, ಕಾರ್ಯಕ್ರಮದ ಸಿದ್ಧತೆಗಳನ್ನು ನೋಡಿಕೊಳ್ಳುವುದು ರಾಜ್ಯದ ಮುಖ್ಯಮಂತ್ರಿಯ ಜವಾಬ್ದಾರಿಯಾಗಿದೆ’ ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಸಲುವಾಗಿಇಡೀ ಅಯೋಧ್ಯೆಯನ್ನು ಅಲಂಕರಿಸಲಾಗುತ್ತಿದ್ದು, ಯೋಗಿ ಆದಿತ್ಯನಾಥ್ ಅವರು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಶನಿವಾರ ಅಯೋಧ್ಯೆಯ ಹಲವು ಪ್ರದೇಶಗಳಲ್ಲಿ ಮಣ್ಣಿನ ದೀಪಗಳು ಮತ್ತು ವರ್ಣರಂಜಿತ ದೀಪಗಳನ್ನು ಬೆಳಗಿಸಲಾಗಿದೆ.

ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ ರಾಜ್ಯದ ಉನ್ನತ ಅಧಿಕಾರಿಗಳುಕಳೆದ ಒಂದು ತಿಂಗಳಿನಿಂದ ಅಯೋಧ್ಯೆಗೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. ರಸ್ತೆಗಳ ಅಗಲೀಕರಣ ಹಾಗೂ ಇತರ ಅಭಿವೃದ್ಧಿ ಚಟುವಟಿಕೆಗಳೂ ನಡೆಯುತ್ತಿವೆ. ಇಡೀ ನಗರದ ಚಿತ್ರಣವೇ ಬದಲಾದಂತಾಗಿದೆ.

ನಗರದಲ್ಲಿ ಕೋವಿಡ್–19 ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ ಎಂದು ಅಯೋಧ್ಯೆಯಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಹೇಳಿದ್ದಾರೆ.

‘ಯಾವುದೇ ಸ್ಥಳದಲ್ಲಿ ಐದಕ್ಕಿಂತ ಹೆಚ್ಚು ಜನರು ಒಟ್ಟುಗೂಡಬಾರದು ಎಂದು ನಾವು ಎಲ್ಲರಲ್ಲಿ ವಿನಂತಿಸಿದ್ದೇವೆ. ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ 12 ಸ್ಥಳಗಳಲ್ಲಿ ಬದಲಿ ಮಾರ್ಗಗಳನ್ನು ಗುರುತಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ 2019ರ ನವೆಂಬರ್‌ನಲ್ಲಿ,ರಾಮ ಮಂದಿರ ನಿರ್ಮಾಣಕ್ಕೆ ನಿವೇಶನ ಹಸ್ತಾಂತರಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.