ಭಾನುವಾರ, ಆಗಸ್ಟ್ 1, 2021
22 °C

ಬಾಬರಿ ಮಸೀದಿ ಪ್ರಕರಣ: ವಿಚಾರಣೆಗೆ ಹಾಜರಾದ ಉಮಾ ಭಾರತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಬಾಬರಿ ಮಸೀದಿ ದ್ವಂಸ ಪ್ರಕರಣ ಸಂಬಂಧ, ಸಿಬಿಐ ವಿಶೇಷ ನ್ಯಾಯಾಲಯದ ಎದುರು ಗುರುವಾರ‌‌‌ ವಿಚಾರಣೆಗೆ ಹಾಜರಾದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ, ಈ ಪ್ರಕರಣದಲ್ಲಿ ಕಾಂಗ್ರೆಸ್‌ ತನ್ನನ್ನು ಅನವಶ್ಯಕವಾಗಿ ಸಿಲುಕಿಸಿದೆ ಎಂದು ಆರೋಪಿಸಿದರು.

‘ರಾಜಕೀಯ ದುರುದ್ದೇಶದಿಂದ ಅಂದಿನ ಕೇಂದ್ರ ಸರ್ಕಾರ ನನ್ನನ್ನು ಸೇರಿದಂತೆ ಇತರ ಕೆಲವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ರಾಜಕೀಯ ಒತ್ತಡಕ್ಕೆ ಮಣಿದು ಕಲ್ಪಿತ ಸಾಕ್ಷ್ಯಗಳ ಆಧಾರದ ಮೇಲೆ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಹೇಳಿದರು.  

ಪ್ರಕರಣದ ಇತರ ಆರೋಪಿಗಳಾಗಿರುವ ಬಿಜೆಪಿಯ ಹಿರಿಯ ಮುಖಂಡರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ ಮತ್ತು ಕಲ್ಯಾಣ್‌ ಸಿಂಗ್‌ ತಮ್ಮ ಹೇಳಿಕೆಗಳನ್ನು ವಿಡಿಯೊ ಮೂಲಕ ದಾಖಲಿಸುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು