ಸೋಮವಾರ, ಜುಲೈ 26, 2021
26 °C

ಬಾಬರಿ ಮಸೀದಿ ಪ್ರಕರಣ: ಜುಲೈ 24ಕ್ಕೆ ಅಡ್ವಾಣಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ, ಜುಲೈ 24 ರಂದು ಬಿಜೆಪಿ ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ವಿಶೇಷ ಸಿಬಿಐ ನ್ಯಾಯಾಲಯ ಸೋಮವಾರ ತಿಳಿಸಿದೆ. 

ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಕಲಂ 313ರ ಅನುಸಾರ ಅವರ ಹೇಳಿಕೆಯನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ದಾಖಲಿಸಲಾಗುತ್ತದೆ.  

ಪ್ರಕರಣದ ಇತರ ಆರೋಪಿಗಳಾಗಿರುವ ಶಿವಸೇನಾ ಮುಖಂಡ ಸತೀಶ್ ಪ್ರಧಾನ್ ವಿಚಾರಣೆ ಜುಲೈ 22ರಂದು ಮತ್ತು ಜುಲೈ 23ರಂದು ಬಿಜೆಪಿಯ ಹಿರಿಯ ಮುಖಂಡ ಮುರಳಿ ಮನೋಹರ ಜೋಷಿ ತಮ್ಮ ಹೇಳಿಕೆಗಳನ್ನು ವಿಡಿಯೊ ಮೂಲಕ ದಾಖಲಿಸುವ ಸಾಧ್ಯತೆ ಇದೆ. 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು