ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಲ್ವನ್‌ನಿಂದ ಹಿಂದೆ ಸರಿದ ಪಿಎಲ್‌ಎ: ಚೀನಾ ಸಚಿವರೊಂದಿಗೆ ಮಾತನಾಡಿದ್ದ ಡೊಭಾಲ್

ಅಕ್ಷರ ಗಾತ್ರ

ನವದೆಹಲಿ: ಗಾಲ್ವನ್‌ ಕಣಿವೆ ಪ್ರದೇಶದಿಂದ ಚೀನಾ ಯೋಧರು ಹಿಂದೆ ಸರಿಯುವುದಕ್ಕೂ ಮುನ್ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಭಾನುವಾರ ವಿಡಿಯೊ ಕರೆ ಮೂಲಕ ಮಾತುಕತೆ ನಡೆಸಿದ್ದರು ಎನ್ನಲಾಗಿದೆ.

ಡೊಭಾಲ್ ಮತ್ತು ವಾಂಗ್ ಯಿ ನಡುವೆ ಮಾತುಕತೆ ನಡೆದಿತ್ತು ಎಂದು ಗಾಲ್ವನ್‌ ಕಣಿವೆ ಪ್ರದೇಶದ ಬಿಕ್ಕಟ್ಟಿಗೆ ಸಂಬಂಧಿಸಿದ ಮಾಹಿತಿಯುಳ್ಳ ಉನ್ನತ ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆವರದಿ ಮಾಡಿದೆ.

ನೈಜ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಪೂರ್ಣವಾಗಿ ಶಾಂತಿ ಸ್ಥಾಪಿಸುವ ವಿಚಾರ ಮತ್ತು ಗಾಲ್ವನ್ ಕಣಿವೆ ಸಂಘರ್ಷದಂತಹ ಘಟನೆಗಳು ಮರುಕಳಿಸದಂತೆ ಭಾರತ–ಚೀನಾ ಜತೆಯಾಗಿ ಕಾರ್ಯನಿರ್ವಹಿಸಬೇಕಿದೆ ಎಂಬುದು ಉಭಯ ನಾಯಕರ ಮಾತುಕತೆ ವೇಳೆ ಪ್ರಸ್ತಾಪವಾಗಿದೆ ಎಂದೂ ವರದಿ ಉಲ್ಲೇಖಿಸಿದೆ.

ಗಾಲ್ವನ್‌ ಕಣಿವೆಯ ಕೆಲವು ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದ ಚೀನಾದ ಸೈನಿಕರು ಟೆಂಟ್‌ಗಳನ್ನು ತೆರವು ಮಾಡುತ್ತಿದ್ದು, ಸೇನೆ ಅಲ್ಲಿಂದ ಹಿಂದೆ ಸರಿಯುತ್ತಿರುವುದರ ಸೂಚನೆಯಾಗಿದೆ’ ಎಂದು ಸರ್ಕಾರದ ಮೂಲಗಳು ಇಂದು (ಸೋಮವಾರ) ಬೆಳಿಗ್ಗೆ ತಿಳಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT