ಬುಧವಾರ, ಜುಲೈ 28, 2021
28 °C
ರಾಷ್ಟ್ರಪತಿಯನ್ನು ಭೇಟಿಯಾದ ಟಿಎಂಸಿ ನಿಯೋಗ

ಶಾಸಕರ ಸಾವು ಪ್ರಕರಣ | ಬಿಜೆಪಿ ಸತ್ಯ ತಿರುಚಿದೆ: ಮಮತಾ ಬ್ಯಾನರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಬಿಜೆಪಿ ಶಾಸಕರೊಬ್ಬರ ನಿಗೂಢ ಸಾವಿಗೆ ಸಂಬಂಧಿಸಿದಂತೆ, ಬಿಜೆಪಿ ಮಾಹಿತಿಯನ್ನು ತಿರುಚಿದೆ ಎಂದು ರಾಷ್ಟ್ರಪತಿಯವರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಪತ್ರ ಬರೆದು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ, ಬಿಜೆಪಿ ನಿಯೋಗ ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಪಶ್ಚಿಮ ಬಂಗಾಳ ಸರ್ಕಾರವನ್ನು ಕಿತ್ತೊಗೆಯುವಂತೆ ಒತ್ತಾಯಿಸಿದ ಮರುದಿನವೇ ಅವರು, ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ. 

‘ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದೆ’ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 

‘ಶಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆ ಮತ್ತು ಮರಣೋತ್ತರ ಪರೀಕ್ಷೆಯಿಂದ ಗೊತ್ತಾಗಿದೆ. ಬಿಜೆಪಿ ಹೇಳುತ್ತಿರುವಂತೆ ಇದು ರಾಜಕೀಯ ಪ್ರೇರಿತ ಕೊಲೆಯಲ್ಲ’ ಎಂದು ಅವರು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. 

‘ಶಾಸಕರು ಮೃತಪಟ್ಟಿರುವ ವಿಷಯ ತಿಳಿದ ತಕ್ಷಣವೇ ಸರ್ಕಾರ ಅಗತ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ. ಪಶ್ಚಿಮ ಬಂಗಾಳ ಎಲ್ಲಾ ರಾಜಕೀಯ ಪಕ್ಷ, ಅವರ ನಾಯಕರು ಮತ್ತು ಕಾರ್ಯಕರ್ತರನ್ನು ಗೌರವಿಸುತ್ತದೆ’ ಎಂದು ಹೇಳಿದ್ದಾರೆ. 

‘ಬಿಜೆಪಿ ಸತ್ಯವನ್ನು ತಿರುಚಿ ಮಾಹಿತಿ ನೀಡಿರಬಹುದು. ಪ್ರಕರಣಕ್ಕೆ ಸಂಬಂಧಿಸಿದ ಸತ್ಯಾಂಶದ ಕುರಿತು ನಿಮ್ಮ ಗಮನ ಸೆಳೆಯಲು ಬಯಸುತ್ತಿದ್ದೇನೆ. ಮೃತರ ಶರ್ಟ್‌ ಜೇಬಿನಲ್ಲಿ ಡೆತ್‌ನೋಟ್‌ ದೊರಕಿದ್ದು, ಹಣಕಾಸಿನ ವ್ಯವಹಾರ ಸಂಬಂಧ ಹೊಂದಿದ್ದ ಇಬ್ಬರ ಹೆಸರನ್ನೂ ಅವರು ಪತ್ರದಲ್ಲಿ ಬರೆದಿದ್ದಾರೆ. ಈ ಇಬ್ಬರಲ್ಲಿ ಒಬ್ಬರನ್ನು ಈಗಾಗಲೇ ಸಿಐಡಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.  

ತೃಣಮೂಲ ಕಾಂಗ್ರೆಸ್‌ನ ಸಂಸದ ಡರೆಕ್ ಒ ಬ್ರಯಾನ್ ನೇತೃತ್ವದ ನಿಯೋಗ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಪ್ರಕರಣದ ವಿವರಣೆ ನೀಡಿದೆ. 

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಮಂಗಳವಾರ ಉತ್ತರ ಬಂಗಾಳದಲ್ಲಿ ಬಂದ್‌ಗೆ ಕರೆ ನೀಡಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು