ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಸಿಎಂ ನಿತೀಶ್ ಕುಮಾರ್‌ಗೆ ಕೋವಿಡ್‌–19 ಪರೀಕ್ಷೆ: ನೆಗೆಟಿವ್ ಫಲಿತಾಂಶ

Last Updated 5 ಜುಲೈ 2020, 3:44 IST
ಅಕ್ಷರ ಗಾತ್ರ

ಪಟ್ನಾ: ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು
ಅವರಿಗೆ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಬಿಹಾರ ವಿಧಾನ ಪರಿಷತ್ ಸಭಾಪತಿ ಅವಧೇಶ್ ನಾರಾಯಣ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಇವರ
ಜೊತೆಗೂಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ನಿತೀಶ್
ಕುಮಾರ್ ಅವರು ಕೋವಿಡ್‌–19 ಪರೀಕ್ಷೆಗೆ ಬಳಗಾಗಿದ್ದರು.

ಸಭಾಪತಿ ಮತ್ತು ಮುಖ್ಯಮಂತ್ರಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ 14 ಅಧಿಕಾರಿಗಳುಹಾಗೂ
ಕಚೇರಿ ಸಿಬ್ಬಂದಿಗಳಿಗೂ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿದ್ದು ಅವರಿಗೂ ನೆಗೆಟಿವ್ ಫಲಿತಾಂಶ ಬಂದಿದೆಎಂದು ಏಮ್ಸ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ನಿತೀಶ್‌ ಕುಮಾರ್ ಪಕ್ಕದಲ್ಲಿ ಕುಳಿತಿದ್ದ ಸಭಾಧ್ಯಕ್ಷ ವಿಜಯ್ ಕುಮಾರ್ ಚೌಧರಿ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್‌
ಕುಮಾರ್‌ ಮೋದಿ ಅವರನ್ನು ಕೊರೊನಾ ವೈರಸ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರ ವರದಿಯ ಫಲಿತಾಂಶ ಬರಬೇಕಿದೆ
ಎಂದು ವೈದ್ಯರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಗಣ್ಯರನ್ನು ಸ್ಕ್ರೀನಿಂಗ್‌ಗೆ ಗುರಿಪಡಿಸಲಾಗುವುದು ಎಂದು ಸಿಎಂ
ಕಚೇರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT