ಗುರುವಾರ , ಆಗಸ್ಟ್ 13, 2020
21 °C

ಬಿಹಾರ: ಭಾರಿ ಮಳೆಯಿಂದ ಅವಘಡ 18 ಮಂದಿ ಬಲಿ, ಜನಜೀವನ ಅಸ್ತವ್ಯಸ್ತ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಪಾಟ್ನಾ(ಬಿಹಾರ): ಶನಿವಾರ ಬೆಳಿಗ್ಗೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬಿಹಾರದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ತಲೆದೋರಿದ್ದು, ಸಿಡಿಲಿಗೆ 18 ಮಂದಿ ಮೃತಪಟ್ಟಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಿಹಾರದ ಲಾಖಿಸರಾಯ್, ಗಯಾ, ಬಂಕಾ, ಜಮೈ, ಸಮಷ್ಟಿಪುರ, ವೈಶಾಲಿ, ನಳಂದ ಹಾಗೂ ಬೋಜ್‌ಪುರ ಜಿಲ್ಲೆಗಳಲ್ಲಿ ಸಿಡಿಲಿನಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ 18 ಮಂದಿ ಸಾವನ್ನಪ್ಪಿದ್ದು, ಮಳೆಯಿಂದಾಗಿ ಜನ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಎನ್‌ಡಿಆರ್ ಎಫ್, ಎಸ್‌ಡಿಆರ್‌ಎಫ್ ತಂಡಗಳು ಸಂಕಷ್ಟದಲ್ಲಿರುವ ಎಲ್ಲಾ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿವೆ. ಭಾರಿ ಮಳೆಯಾಗಿರುವ ಕಡೆಗಳಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಪಶ್ಚಿಮಬಂಗಾಳಗಳಲ್ಲಿ ಮಂಗಳವಾರದವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರ ಪ್ರಕೃತಿ ವಿಕೋಪ ನಿರ್ವಹಣಾ ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಿವೆ.

ಮುಖ್ಯಮಂತ್ರಿ ಸೂಚನೆ

ತೊಂದರೆಗೀಡಾದ ಪ್ರದೇಶಗಳಲ್ಲಿ ಶೀಘ್ರವೇ ಪರಿಹಾರ ಕಾರ್ಯಕೈಗೊಳ್ಳುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು