ಭಾನುವಾರ, ಸೆಪ್ಟೆಂಬರ್ 26, 2021
21 °C
ನಾಯಕನ ತಂದೆ, ಸಹೋದರನೂ ದಾಳಿಯಲ್ಲಿ ಸಾವು

ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ ಉಗ್ರರು

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೊರ ಜಿಲ್ಲೆಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಾಸಿಮ್‌ ಅಹ್ಮದ್‌ ಬರಿ ಹಾಗೂ ಅವರ ತಂದೆ, ಸಹೋದರರೊಬ್ಬರನ್ನು ಉಗ್ರರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ) ದಿಲ್ಭಾಗ್‌ ಸಿಂಗ್‌ ತಿಳಿಸಿದರು. 

ಪೊಲೀಸ್‌ ಠಾಣೆಯ ಬಳಿಯೇ ಇರುವ ವಾಸಿಮ್‌ ಅವರ ಮಳಿಗೆ ಮುಂಭಾಗದಲ್ಲಿ ಬುಧವಾರ ರಾತ್ರಿ 9ರ ವೇಳೆಗೆ ಈ ಕೃತ್ಯ ನಡೆದಿದ್ದು,  ಉಗ್ರರು ಏಕಾಏಕಿ ವಾಸಿಮ್‌ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ವಾಸಿಮ್‌ ಅವರ ಸಹೋದರ ಉಮರ್‌ ಹಾಗೂ ತಂದೆ ಬಶೀರ್‌ ಅಹ್ಮದ್‌ ಅವರನ್ನು ಬಂಡಿಪೊರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರಿಬ್ಬರೂ ಮೃತಪಟ್ಟಿದ್ದಾರೆ ಎಂದು ಸಿಂಗ್‌ ತಿಳಿಸಿದರು. 

ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.