ಭಾನುವಾರ, ಆಗಸ್ಟ್ 1, 2021
22 °C

ಮಾದಕ ದ್ರವ್ಯ ಸಾಗಾಣೆ ಮಾಡುತ್ತಿದ್ದ ಬಿಎಸ್‌ಎಫ್‌ ಯೋಧನ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮುದ ಅಂತರರಾಷ್ಟ್ರೀಯ ಗಡಿಯಲ್ಲಿ ನಿಯೋಜಿಸಲಾಗಿದ್ದ ಗಡಿ ಭದ್ರತಾ ಪಡೆಯ ಯೋಧನೊಬ್ಬನನ್ನು ಪಂಜಾಬ್‌ ಪೊಲೀಸರು ಬಂಧಿಸಿದ್ದಾರೆ.

ಯೋಧನಿಂದ ಶಸ್ತ್ರಾಸ್ತ್ರಗಳು, ಮೂರು ಮೊಬೈಲ್‌ ದೂರವಾಣಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈತ ಪಂಜಾಬ್‌ನ ಗುರದಾಸಪುರ ಜಿಲ್ಲೆಯ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂಬಾ ವಲಯದಲ್ಲಿ ಈ ಯೋಧನನ್ನು ನಿಯೋಜಿಸಲಾಗಿತ್ತು. ಜಮ್ಮು, ಪಂಜಾಬ್‌, ರಾಜಸ್ಥಾನ ಮತ್ತು ಗುಜರಾತ್‌ ರಾಜ್ಯಕ್ಕೆ ಹೊಂದಿಕೊಂಡಿರುವ 3,300 ಕಿಲೋ ಮೀಟರ್‌ ಪಾಕಿಸ್ತಾನದ ಗಡಿಯುದ್ದಕ್ಕೂ ಬಿಎಸ್‌ಎಫ್‌ ಕಾವಲು ಕಾಯುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು