ಶನಿವಾರ, ಆಗಸ್ಟ್ 8, 2020
23 °C

ಮುಂಬೈನಲ್ಲಿ ಕಟ್ಟಡ ಕುಸಿತ: ಅವಶೇಷಗಳ ಅಡಿ ಸಿಲುಕಿ 4 ಮಂದಿ ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಂಬೈನಲ್ಲಿ ಕಟ್ಟಡ ಕುಸಿತ

ಮುಂಬೈ: ಇಲ್ಲಿ ಕೋಟೆ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಐದು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿದಿದೆ. ಕಟ್ಟಡದ ಅವಶೇಷಗಳ ಅಡಿ ಸಿಲುಕಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.

ಎನ್‌ಡಿಆರ್‌ಎಫ್‌ ತಂಡ ರಾತ್ರಿ 10ರ ವರೆಗೂ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಿದ್ದಾರೆ. ಬುಧವಾರ ರಾತ್ರಿ ಮುಂಬೈನಲ್ಲಿ ಧಾರಾಕಾರ ಮಳೆ ಸುರಿದಿದೆ. ಗುರುವಾರ ಬೆಳಿಗ್ಗೆ 8:30ರ ವರೆಗೂ ಮಳೆ ಮುಂದುವರಿದಿತ್ತು.

ಕೋಟೆಯ ಲಕ್ಕಿ ಹೌಸ್ ಸಮೀಪದ ಭಾನುಶಾಲಿ ಕಟ್ಟಡ 4:43ಕ್ಕೆ ಕುಸಿದಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ಹಾಗೂ ಎನ್‌ಡಿಆರ್‌ಎಫ್‌ ತಂಡ ಶೋಧ ಕಾರ್ಯ ನಡೆಸುತ್ತಿದೆ.

ಇಂದು ಬೆಳಿಗ್ಗೆ ಮುಂಬೈ ಮಲಾಡ್‌ನ ಅಬ್ದುಲ್‌ ಹಮಿದ್ ಮಾರ್ಗ್‌ನಲ್ಲಿ ಚಾವ್ಲ್‌ವೊಂದರಲ್ಲೂ (ನಿವಾಸಿ ಕಟ್ಟಡ) ಕುಸಿತ ಸಂಭವಿಸಿತ್ತು. ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು