ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಚಿಕಿತ್ಸೆ ವೇಳೆ ಕ್ಯಾತಿಟರ್‌ ಮುರಿದು ಮಹಿಳೆ ಸಾವು

Last Updated 2 ಜುಲೈ 2020, 20:30 IST
ಅಕ್ಷರ ಗಾತ್ರ

ತಿರುವನಂತಪುರ: ಆಲಪ್ಪುಳ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಆ್ಯಂಜಿಯೊಗ್ರಾಂ ನಡೆಸುವ ಸಂದರ್ಭದಲ್ಲಿ ಬಳಸುವ ವೈದ್ಯಕೀಯ ಸಲಕರಣೆಯಾದ ತೂತುನಳಿಕೆ (ಕ್ಯಾತಿಟರ್‌) ಮುರಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ವೈದ್ಯಕೀಯ ನಿರ್ಲಕ್ಷ್ಯ ಆರೋಪದ ಮೇರೆಗೆ ಮೃತ ಮಹಿಳೆಯ ಸಂಬಂಧಿಕರು ದೂರು ದಾಖಲಿಸಿದ್ದಾರೆ. ಆದರೆ, ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡವುಇದು ಹೃದಯಾಘಾತದಿಂದ ಸಂಭವಿಸಿದ ಸಾವು ಎಂದು ಆರೋಪವನ್ನು ಅಲ್ಲಗಳೆದಿದೆ.

55 ವರ್ಷದ ಮಹಿಳೆ ಬಿಂದು ಅವರು ಮಾವೇಲಿಕ್ಕರದ ಖಾಸಗಿ ಆಸ್ಪತ್ರೆಯಲ್ಲಿ ಆ್ಯಂಜಿಯೋಗ್ರಾಂ ಚಿಕಿತ್ಸೆಗೆ ಒಳಗಾಗಿದ್ದರು. ಈ ಸಂದರ್ಭದಲ್ಲಿ ತೂತುನಳಿಕೆಯು ಮುರಿದು ಅಪಧಮನಿಯೊಳಗೆ ಸಿಲುಕಿಕೊಂಡಿತ್ತು. ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದಾಗಿ ಒಂದು ವಾರಗಳ ನಂತರ ಅವರು ಮನೆಗೆ ಮರಳಿದ್ದರು. ಜೂನ್‌ 30ರಂದು ಅಸ್ವಸ್ಥಗೊಂಡು ಮೃತಪಟ್ಟರು. ಈ ಬಗ್ಗೆ ಸಂಬಂಧಿಕರು ದೂರು ಸಲ್ಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ನಡೆಸುವ ಸಂದರ್ಭದಲ್ಲಿ ಸಲಕರಣೆ ಮುರಿದು ರೋಗಿಯ ಜೀವಕ್ಕೆ ಹಾನಿಯಾಗುವುದು ವಿರಳಾತಿ ವಿರಳವಾಗಿದ್ದು, ಕಳಪೆ ಮಟ್ಟದ ಸಲಕರಣೆ ಇಂಥ ಪ್ರಕರಣಕ್ಕೆ ಕಾರಣವಾಗಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT