ಭಾನುವಾರ, ಆಗಸ್ಟ್ 1, 2021
27 °C
ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ

‘ಕೋವಿಡ್‌–19 ರೋಗಿಗಳಿಗೆ ಸ್ಮಾರ್ಟ್‌ಫೋನ್‌ ಬಳಸಲು ಅವಕಾಶ ನೀಡಿ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ದೃಢಪಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಸ್ಮಾರ್ಟ್‌ಫೋನ್‌ ಅಥವಾ ಟ್ಯಾಬ್ಲೆಟ್‌ ಉಪಕರಣಗಳ ಬಳಕೆಗೆ ಅವಕಾಶ ನೀಡಬೇಕು ಎಂದು ಸೂಚಿಸಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. 

ಆರೋಗ್ಯ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸೇವೆಗಳ ಪ್ರಧಾನ ನಿರ್ದೇಶಕ (ಡಿಜಿಎಚ್‌ಎಸ್‌) ಡಾ.ರಾಜೀವ್‌ ಗರ್ಗ್‌ ಈ ಕುರಿತು ರಾಜ್ಯಗಳ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಸ್ಮಾರ್ಟ್‌ಫೋನ್‌ ನೆರವಿನಿಂದ ತಮ್ಮ ಕುಟುಂಬದವರು, ಸ್ನೇಹಿತರ ಜೊತೆಗೆ ವಿಡಿಯೊ ಕಾನ್ಫರೆನ್ಸ್‌ ಮುಖಾಂತರ ರೋಗಿಗಳು ಮಾತನಾಡುತ್ತಿದ್ದರೆ, ಅವರಿಗೆ ನೈತಿಕ ಸ್ಥೈರ್ಯ, ಮಾನಸಿಕ ನೆಮ್ಮದಿ, ಬೆಂಬಲ ಸಿಗಲಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹಲವು ಆಸ್ಪತ್ರೆಗಳಲ್ಲಿ ಮೊಬೈಲ್‌ ಫೋನ್‌ಗಳ ಬಳಕೆಗೆ ಅವಕಾಶ ನೀಡಲಾಗುತ್ತಿದೆಯಾದರೂ, ಕೆಲವೆಡೆ ನಿರ್ಬಂಧ ಹೇರಿರುವ ಕಾರಣ ಕೇಂದ್ರ ಈ ಸೂಚನೆ ನೀಡಲಾಗಿದೆ. 

‘ರೋಗಿಗಳು ಬಳಸುವ ಉಪಕರಣಗಳ ಮುಖಾಂತರ ಸೋಂಕು ಹರಡದಂತೆ ತಡೆಯುವುದು, ಸ್ಮಾರ್ಟ್‌ಫೋನ್‌ ಬಳಕೆಗೆ ಸಮಯ ನಿಗದಿ ಮುಂತಾದ ಮಾರ್ಗಸೂಚಿಗಳನ್ನು ಆಸ್ಪತ್ರೆಗಳೇ ರೂಪಿಸಬಹುದು’ ಎಂದು ಗರ್ಗ್‌ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು