ನವದೆಹಲಿ:ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವ ಚೆನಾಬ್ನದಿ ಮೇಲೆ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮುಂದಿನ ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ರೆಯಾಸಿ ಜಿಲ್ಲೆಯಲ್ಲಿ ಈ ಕಾಮಗಾರಿ ನಡೆಯುತ್ತಿದ್ದು, ಕಾಶ್ಮೀರ ಕಣಿವೆಗೆ ಮೊದಲ ಬಾರಿಗೆ ನೇರ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ.ಈ ಮೂಲಕ ರೈಲ್ವೆ ಸಂಪರ್ಕಜಾಲ ಮತ್ತಷ್ಟು ವಿಸ್ತರಣೆಯಾಗಲಿದ್ದು, 2022 ಡಿಸೆಂಬರ್ ಒಳಗಾಗಿ ಈ ಮಾರ್ಗದಲ್ಲಿ ರೈಲು ಸೇವೆ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಈ ಸೇತುವೆಯು ನೆಲಮಟ್ಟದಿಂದ 359 ಮೀಟರ್ ಎತ್ತರವಿದ್ದು, ವಿಶ್ವವಿಖ್ಯಾತ ಐಫೆಲ್ ಟವರ್‌ಗಿಂತ 35ಮೀಟರ್ ಎತ್ತರ ಇದೆ. ಗಂಟೆಗೆ 266 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯ ಈ ಸೇತುವೆಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕೇಂದ್ರ ಸರ್ಕಾರದ ಪ್ರಮುಖ ಅಧಿಕಾರಿಗಳೇ ಈ ಕಾಮಗಾರಿಯ ಮೇಲುಸ್ತುವಾರಿ ವಹಿಸಿದ್ದು, ವರ್ಷದಿಂದ ಕಾಮಗಾರಿ ಚುರುಕು ಪಡೆದಿದೆ. 2015ರಲ್ಲಿ ಜಮ್ಮು ಮತ್ತು ಕಾಶ್ಮೀರದ ಹಲವು ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ಪ್ರಧಾನ ಮಂತ್ರಿ ಅಭಿವೃದ್ಧಿ ಪ್ಯಾಕೆಜ್‌ನಡಿ ₹80,068 ಕೋಟಿ ಬಿಡುಗಡೆ ಮಾಡಲಾಗಿತ್ತು. ಈ ಪೈಕಿ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ ವಿಭಾಗದಲ್ಲಿ ₹58,627 ಕೋಟಿಯ 54 ಯೋಜನೆಗಳು ಹಾಗೂ ಲಡಾಖ್‌ನಲ್ಲಿ 21,441 ಕೋಟಿ ವೆಚ್ಚದಲ್ಲಿ 9 ಯೋಜನೆಗಳು ಅನುಷ್ಠಾನಗೊಳ್ಳಲಿವೆ.

ಉದ್ಧಂಪುರ–ಕತ್ರಾ, ಬನಿಹಾಲ್–ಕ್ವಾಜಿಗುಂದ್, ಕ್ವಾಜಿಗುಂದ್–ಬಾರಾಮುಲ್ಲಾ ನಡುವಿನ ರೈಲು ಮಾರ್ಗದ ಕಾಮಗಾರಿ ಪೂರ್ಣಗೊಂಡಿದ್ದು, ಕತ್ರಾ–ಬನಿಹಾಲ್ ನಡುವಿನ 111 ಕಿ.ಮೀ ರೈಲ್ವೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಮಾರ್ಗದಲ್ಲಿ ಒಟ್ಟು ಸುರಂಗಗಳ ಉದ್ದವೇ 174 ಕಿ.ಮೀನಷ್ಟಿದ್ದು, ಈ ಪೈಕಿ 126 ಕಿ.ಮೀನಷ್ಟು ಸುರಂಗಗಳ ಕಾಮಗಾರಿ ಪೂರ್ಣಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.