ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲರ ಗುಂಡಿನ ದಾಳಿ: ಸಿಎಎಫ್‌ ಯೋಧ ಬಲಿ

Last Updated 27 ಜುಲೈ 2020, 9:11 IST
ಅಕ್ಷರ ಗಾತ್ರ

ರಾಯಪುರ‌: ಛತ್ತೀಸ್‌ಗಡದ ನಾರಾಯಣಪುರ ಜಿಲ್ಲೆಯ ಅರಣ್ಯ ಪ್ರದೇಶದ ಪೊಲೀಸ್ ಶಿಬಿರವೊಂದರಲ್ಲಿ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಮೇಲೆ ಸೋಮವಾರ ನಕ್ಸಲರು ನಡೆಸಿದ ಗುಂಡಿನ ದಾಳಿಗೆ ಛತ್ತೀಸ‌ಗಡದ ಸಶಸ್ತ್ರ ಪಡೆಯ ಯೋಧರೊಬ್ಬರು ಬಲಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೃತಪಟ್ಟವರು ಛತ್ತೀಸ‌ಗಡ ಸಶಸ್ತ್ರಪಡೆಯ 22ನೇ ಬೆಟಾಲಿಯನ್‌ನ ಕಾನ್‌ಸ್ಟೆಬಲ್‌ ಜಿತೇಂದ್ರ ಬಕ್ಡೆ. ಇವರು ಕಡೆಮೇಟಾ ಶಿಬಿರದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದರು.

ಛೊಟೆ ಡೋಂಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 8.30ರ ಸಮಯದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಶಿಬಿರದಲ್ಲಿದ್ದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT