ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಂಗ್ಡು ನಗರದಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ ಮುಚ್ಚಲು ಚೀನಾ ಸೂಚನೆ

Last Updated 24 ಜುಲೈ 2020, 10:27 IST
ಅಕ್ಷರ ಗಾತ್ರ

ಬೀಜಿಂಗ್‌: ಚೆಂಗ್ಡು ನಗರದಲ್ಲಿರುವ ಕಾನ್ಸುಲೇಟ್ ಕಚೇರಿಯನ್ನು ಮುಚ್ಚುವಂತೆ ಅಮೆರಿಕಕ್ಕೆ ಚೀನಾ ಗುರುವಾರ ಸೂಚನೆ ನೀಡಿದೆ. ಅಮೆರಿಕದ ಹ್ಯೂಸ್ಟನ್‌ ನಗರದಲ್ಲಿದ್ದ ಕಾನ್ಸುಲೇಟ್ ಕಚೇರಿಯನ್ನು ಮುಚ್ಚಿಸಿದ ಅಮೆರಿಕದ ಕ್ರಮಕ್ಕೆ ಪ್ರತಿಯಾಗಿ ಚೀನಾ ಈ ಕ್ರಮ ಕೈಗೊಂಡಿದೆ.

‘ಅಮೆರಿಕವು ಕೈಗೊಂಡ ಏಕಪಕ್ಷೀಯ ಕ್ರಮಕ್ಕೆ ಪ್ರತಿಯಾಗಿ ಈ ಕ್ರಮವನ್ನು ಕೈಗೊಂಡಿದ್ದೇವೆ. ಚೀನಾದ ಕ್ರಮವು ಅಗತ್ಯವಾಗಿತ್ತು ಮತ್ತು ಕಾನೂನುಬದ್ಧವಾಗಿದೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿದೆ.

ಅಮೆರಿಕವು ಹ್ಯೂಸ್ಟನ್‌ನಗರದಲ್ಲಿರುವ ಚೀನಾದ ಕಾನ್ಸುಲೇಟ್ ಕಚೇರಿಯನ್ನು ಬುಧವಾರ ಮುಚ್ಚಿಸಿತ್ತು. ‘ನಮ್ಮ ಬೌದ್ಧಿಕ ಆಸ್ತಿ ಹಾಗೂ ಖಾಸಗಿ ಮಾಹಿತಿಗಳನ್ನು ಕಾಪಾಡಿಕೊಳ್ಳುವ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಅಮೆರಿಕ ಹೇಳಿತ್ತು.

ಇದನ್ನು ಖಂಡಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್‌ ವೆನ್‌ಬಿನ್‌, ‘ಅಮೆರಿಕವು ದುರುದ್ದೇಶಪೂರಿತ ಸುಳ್ಳು ಸುದ್ದಿಯ ಆಧಾರದಲ್ಲಿ ಇಂಥ ನಿರ್ಧಾರ ಕೈಗೊಂಡಿದೆ. ನಮ್ಮ ಅಧಿಕಾರಿಗಳು ಯಾವತ್ತೂ ಅಂತರರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸಿಲ್ಲ. ಇದು ಪರಿಸ್ಥಿತಿಯನ್ನು ಉಲ್ಬಣಗೊಳಿಸುವ ಕ್ರಮ. ಅಮೆರಿಕ– ಚೀನಾ ನಡುವಿನ ಸ್ನೇಹಕ್ಕೆ ಇಂಥ ಕ್ರಮಗಳಿಂದ ಧಕ್ಕೆಯಾಗುತ್ತದೆ. ಅಮೆರಿಕದ ಈ ಕೃತ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು’ ಎಂದು ಎಚ್ಚರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT