ಮಂಗಳವಾರ, ಆಗಸ್ಟ್ 3, 2021
20 °C

ಪ್ರಿಯಾಂಕಾ ಗಾಂಧಿ ಲಖನೌಗೆ ಸ್ಥಳಾಂತರ?

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಈ ತಿಂಗಳ ಅಂತ್ಯದೊಳಗೆ ಲೋಧಿ ಎಸ್ಟೇಟ್‌ ಬಂಗಲೆಯನ್ನು ಖಾಲಿ ಮಾಡಲಿದ್ದು, ಕೋವಿಡ್‌ ಬಿಕ್ಕಟ್ಟು ಸುಧಾರಿಸಿದ ನಂತರ ಲಖನೌಗೆ ಸ್ಥಳಾಂತರಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಪರ್ಯಾಯ ವಾಸದ ವ್ಯವಸ್ಥೆಯನ್ನು ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ. ಆದರೆ, ಈವರೆಗೆ ಯಾವುದೇ ಮನೆಯನ್ನು ಅಂತಿಮಗೊಳಿಸಿಲ್ಲ ಎಂದು ಹೇಳಲಾಗಿದೆ. 

ಲಾಕ್‌ಡೌನ್‌ ಮುಗಿದ ನಂತರ ಲಖನೌಗೆ ಸ್ಥಳಾಂತರಗೊಳ್ಳಲು ಮನೆಯನ್ನು ಗೊತ್ತು ಮಾಡಲಾಗಿದೆ. ಇದು ನೆಹರೂ ಹತ್ತಿರದ ಸಂಬಂಧಿಯೂ ಆಗಿದ್ದ ಕೇಂದ್ರದ ಮಾಜಿ ಸಚಿವೆ ಶೈಲಾ ಕೌಲ್‌ ಅವರಿಗೆ ಸೇರಿದ್ದು, ದುರಸ್ತಿ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿದುಬಂದಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು