ಮಂಗಳವಾರ, ಆಗಸ್ಟ್ 3, 2021
23 °C

ನಮ್ಮ ಪಕ್ಷದ ಬಗ್ಗೆ ಚಿಂತೆಯಾಗಿದೆ: ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್ ಟ್ವೀಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನಮ್ಮ ಪಕ್ಷದ ಬಗ್ಗೆ ಚಿಂತೆಯಾಗಿದೆ ಎಂದು ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌ ಅವರು ಬೇಸರದಿಂದ ಟ್ವೀಟ್‌ ಮಾಡಿದ್ದಾರೆ.

ರಾಜಸ್ಥಾನದಲ್ಲಿ ನಡೆಯುತ್ತಿರುವ ಬೆಳವಣಿಗಗಳ ಹಿನ್ನೆಲೆಯಲ್ಲಿ ಕಪಿಲ್ ಸಿಬಲ್ ಈ‌ ಟ್ವೀಟ್‌ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಣ ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್‌ನ ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ವೇಳೆ ಕಾಂಗ್ರೆಸ್‌ನ ಕೆಲವು ಶಾಸಕರ ಜತೆ ಸಚಿನ್ ಪೈಲಟ್ ಅವರು ದೆಹಲಿಯ ಹೋಟೆಲ್‌ ಒಂದರಲ್ಲಿ ತಂಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಕಪಿಲ್‌ ಸಿಬಲ್‌, 'ನಮ್ಮ ಪಕ್ಷದ ಬಗ್ಗೆ ಚಿಂತೆಯಾಗಿದೆ. ಕುದುರೆಗಳು ನಮ್ಮ ಅಶ್ವಶಾಲೆಗಳಿಂದ ಬಿಚ್ಚಿಕೊಂಡು ಹೋದ ನಂತರವೇ ನಾವು ಎಚ್ಚರಗೊಳ್ಳುತ್ತೇವೆಯೇ?' ಎಂದು ತಮ್ಮದೇ ಪಕ್ಷದ ನಾಯಕರನ್ನು ಪ್ರಶ್ನಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು