ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುತ್ತಿರುವ ಅಪರಾಧ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ

Last Updated 5 ಜುಲೈ 2020, 15:53 IST
ಅಕ್ಷರ ಗಾತ್ರ

ಲಖನೌ:ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಮತ್ತು ಅಪರಾಧ ಪ್ರಕರಣಗಳು ಹೆಚ್ಚಲು ಯೋಗಿ ಆದಿತ್ಯನಾಥ್ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ರಾಜ್ಯವು ಅಪರಾಧಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಅಭಿಯಾನಗಳಲ್ಲಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವ ಬೇರೆಯೇ ಇದೆ ಎಂದು ಪ್ರಿಯಾಂಕಾ ಹೇಳಿದ್ದಾರೆ. ರಾಜ್ಯದ ಉತ್ತರ ಭಾಗದಲ್ಲಿ ಕಳೆದ ಒಂದು ವಾರದಲ್ಲಿ 50 ಕೊಲೆಗಳು ನಡೆದಿವೆ ಎಂದೂ ಅವರು ಹೇಳಿದ್ದಾರೆ.

‘ಅಂಕಿಅಂಶಗಳ ಪ್ರಕಾರ ಅನೇಕ ಅಪರಾಧಗಳಲ್ಲಿ ಉತ್ತರ ಪ್ರದೇಶವು ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ. ಜಾನುಪುರದಲ್ಲಿ ಇವತ್ತೂ ಸಹ ಕೊಲೆಯಾಗಿದೆ. ಇದಕ್ಕೆಲ್ಲ ಯಾರು ಹೊಣೆ? ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಅಂಕಿಅಂಶಗಳ ಗ್ರಾಫನ್ನೂ ಅವರು ಟ್ವೀಟ್‌ ಜತೆ ಲಗತ್ತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT