ನವದೆಹಲಿ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಸಂಜೆ 7ಗಂಟೆಗೆ ನಗರದ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
73 ವರ್ಷದ ಸೋನಿಯಾ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.
'ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ' ಎಂದು ಗಂಗಾರಾಮ್ ಆಸ್ಪತ್ರೆಯ ಮುಖ್ಯಸ್ಥ ಡಾ.ಡಿ.ಎಸ್.ರಾಣಾ ಹೇಳಿದ್ದಾರೆ.
ಇದೇ ಫೆಬ್ರುವರಿಯಲ್ಲಿಯೂ ಹೊಟ್ಟೆ ನೋವಿಗಾಗಿ ಸೋನಿಯಾ ಆಸ್ಪತ್ರೆಗೆ ದಾಖಲಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.