ಬುಧವಾರ, ಆಗಸ್ಟ್ 12, 2020
21 °C

ಪರೀಕ್ಷೆ ತಯಾರಿ ಮುಂದುವರಿಸಿ: ಯುಜಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಸೆಪ್ಟೆಂಬರ್‌ ಅಂತ್ಯದಲ್ಲಿ ನಡೆಸಲು ಉದ್ದೇಶಿಸಿರುವ ಅಂತಿಮ ವರ್ಷದ ಪರೀಕ್ಷೆಗಳನ್ನು ರದ್ದುಪಡಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ದಾಖಲಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯನ್ನು ನಿಲ್ಲಿಸಬಾರದು. ನ್ಯಾಯಾಲಯವು ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿಲ್ಲ’ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ
ವು (ಯುಜಿಸಿ) ಸುಪ್ರೀಂ ಕೋರ್ಟ್‌ ಮುಂದೆ ಶುಕ್ರವಾರ ಸ್ಪಷ್ಟಪಡಿಸಿದೆ.

‘ಅರ್ಜಿಯ ವಿಚಾರಣೆ ನಡೆಯುತ್ತಿರುವುದರಿಂದ ‘ತಡೆಯಾಜ್ಞೆ ಇದೆ’ ಎಂದು ಯಾರೂ ಭಾವಿಸಬಾರದು’ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಹೇಳಿದರು. 

ಮೆಹ್ತಾ ಅವರ ವಾದವನ್ನು ಒಪ್ಪಿದ ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ಅವರು, ‘ಹೌದು, ಈ ವಿಚಾರವಾಗಿ ನಾವು ಈವರೆಗೆ ಯಾವುದೇ (ತಡೆ) ಆದೇಶವನ್ನು ನೀಡಿಲ್ಲ’ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು