ಮಂಗಳವಾರ, ಆಗಸ್ಟ್ 3, 2021
26 °C

Covid-19 India Update | 34,884 ಹೊಸ ಪ್ರಕರಣ ದೃಢ, 671 ಮಂದಿ ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 34,884 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 671  ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 

ಇದರೊಂದಿಗೆ ದೇಶದಲ್ಲಿ 10,38,715 ಮಂದಿಗೆ ಸೋಂಕು ತಗುಲಿದ್ದು, 26,273 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 6,53,750 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 3,58,692 ಸಕ್ರಿಯ ಪ್ರಕರಣಗಳು ಇವೆ. 
 

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 2,92,589 ಲಕ್ಷ ಜನರಿಗೆ ಸೋಂಕು ತಗುಲಿದೆ. ಇದುವರೆಗೆ 11,452 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 1,60,907 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, 2,315 ಮಂದಿ ಸಾವಿಗೀಡಾಗಿದ್ದಾರೆ. ಇತ್ತ ರಾಜಧಾನಿ ದೆಹಲಿಯಲ್ಲಿ 1,20,107 ಲಕ್ಷ ಮಂದಿಗೆ ಸೋಂಕು ತಗುಲಿದೆ. ಇದುವರೆಗೆ 3,571 ಮಂದಿ ಕೊನೆಯುಸಿರೆಳೆದಿದ್ದಾರೆ. 

ಇನ್ನುಳಿದಂತೆ ಪಶ್ಚಿಮ ಬಂಗಾಳದಲ್ಲಿ 1,049, ಉತ್ತರ ಪ್ರದೇಶದ 1,084, ಮಧ್ಯ ಪ್ರದೇಶದ 697, ಝಾರ್ಖಂಡ್ 1,147 ಮತ್ತು ಗುಜರಾತಿನಲ್ಲಿ 2,106 ಜನರು ಸಾವಿಗೀಡಾಗಿದ್ದಾರೆ.

ಇನಷ್ಟು...

630 ಜೀವ ಉಳಿಸಿದ ಲಾಕ್‌ಡೌನ್‌: ಅಧ್ಯಯನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು