ಸೋಮವಾರ, ಆಗಸ್ಟ್ 2, 2021
28 °C

Covid Bill Kills: ಆಸ್ಪತ್ರೆಗಳ ದುಬಾರಿ ಚಿಕಿತ್ಸೆ ದರಕ್ಕೆ ಟ್ವೀಟಿಗರ ಆಕ್ರೋಶ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 ಪ್ರಕರಣಗಳು ಏರಿಕೆ ಆಗುತ್ತಿರುವ ಬೆನ್ನಲ್ಲೇ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ದುಬಾರಿ ಮೊತ್ತವನ್ನು ಕೇಳುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. 

ಸರ್ಕಾರ ದರಪಟ್ಟಿಯನ್ನು ನಿಗದಿಪಡಿಸಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ವಿಪರೀತ ಹಣವನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ #CovidBillKills ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗುತ್ತಿದೆ. 

ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸಾ ದರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿಷ್ಣು ವಿ.ಆರ್ ಎಂಬುವವರು, 'ಖಾಸಗಿ ಆಸ್ಪತ್ರೆಯವರು ನಮ್ಮ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಅವರು ನಮ್ಮ ಜೀವದ ಬಗ್ಗೆ ಚಿಂತಿಸುವುದಿಲ್ಲ. ಆದರೆ ಅವರಿಗೆ ಕೇವಲ ಹಣದ ಬಗ್ಗೆ ಚಿಂತೆ ಇದೆ' ಎಂದಿದ್ದಾರೆ. 

ಆಸ್ಪತ್ರೆಗಳು ಕೋವಿಡ್‌ ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿವೆ. ಸರ್ಕಾರ ಕುರುಡಾಗಿ ವರ್ತಿಸುತ್ತಿದೆ. ಇದು ನಾಚಿಕೆ ತರುವಂತಹ ವಿಚಾರ ಎಂದು ವಿದುಷಿ ಎಂಬುವವರು ಟ್ವೀಟ್‌ ಮಾಡಿದ್ದಾರೆ. 

ಮಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಹಗರಣಗಳು ಕಂಡುಬಂದಿವೆ. ಇದನ್ನು ನಿರ್ಲಕ್ಷಿಸಿದರೆ ಬಡ ರೋಗಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಬಹುದು. ಈ ರೀತಿಯ ಆರ್ಥಿಕ ಶೋಷಣೆ ರೋಗಕ್ಕಿಂತ ಕೆಟ್ಟದಾಗಿದೆ ಎಂದು ಸಮೀರ್‌ ಎಂಬುವವರು ಟ್ವೀಟ್‌ ಮಾಡುವ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ. 

ಕಾರ್ಪೊರೇಟ್‌ನ ಅಡ್ಡರಸ್ತೆಯಲ್ಲಿ ಆಸ್ಪತ್ರೆಗಳು ಸುತ್ತುತ್ತಿವೆ. ಹಗಲು ದರೋಡೆ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕಿದೆ. ಸಾಮಾನ್ಯ ಜನರು ಚಿಕಿತ್ಸೆಯ ಬಗ್ಗೆ ಯೋಚಿಸಲು ಸಹ ಸಾಧ್ಯವಾಗುತ್ತಿಲ್ಲ ಎಂದು ಹ್ಯಾರಿಸ್‌ ಇಸ್ಮಾಯಿಲ್‌ ಎಂಬುವವರು ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ. 

ಮಂಗಳೂರಿನ ಖಾಸಗೀ ಆಸ್ಪತ್ರೆಗಳು ಕೋವಿಡ್-19 ಚಿಕಿತ್ಸೆಯ ಹೆಸರಲ್ಲಿ ಬೇಕಾಬಿಟ್ಟಿಯಾಗಿ ಹಣ ಪಡೆದು ದಂಧೆ ನಡೆಸುತ್ತಿದ್ದು, ಶೀಘ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಿ, ಬಡ ರೋಗಿಗಳನ್ನು ರಕ್ಷಿಸಿ ಎಂದು ಅಬ್ದುಲ್‌ ಅಜೀಜ್‌ ಎಂಬುವವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು