ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 49,310 ಕೋವಿಡ್ ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿದ್ದು, 740 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದ್ದು, 30,601 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 8,17,209ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 4,40,135 ಸಕ್ರಿಯ ಪ್ರಕರಣಗಳು ಇವೆ.
Highest single-day spike of 49,310 cases and 740 deaths reported in India in the last 24 hours.
Total #COVID19 positive cases stand at 12,87,945 including 4,40,135 active cases, 8,17,209 cured/discharged/migrated & 30,601 deaths: Health Ministry pic.twitter.com/veE2V1JgH9
ದೇಶದಲ್ಲಿ ಅತಿ ಹೆಚ್ಚು ಸೋಂಕಿರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 3.38 ಲಕ್ಷ ಮಂದಿಗೆ ಸೋಂಕು ತಗುಲಿದ್ದು, 12,556 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 1.8 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದುವರೆಗೆ 3,144 ಮಂದಿ ಸಾವಿಗೀಡಾಗಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 1.2 ಲಕ್ಷ ಜನರಿಗೆ ಸೋಂಕು ತಗುಲಿದೆ. ಈವರೆಗೆ 3,719 ಮಂದಿ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕದಲ್ಲಿ ಗುರುವಾರ ಒಂದೇ ದಿನ 5,030 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 80,863ಕ್ಕೆ ಏರಿಕೆಯಾಗಿದೆ.