ದೇಶದ ವಿವಿಧೆಡೆ ಶನಿವಾರ ಒಂದೇ ದಿನ 22,771 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದು ಈವರೆಗೆ ಒಂದೇ ದಿನ ದೃಢಪಟ್ಟ ಅತಿದೊಡ್ಡ ಸಂಖ್ಯೆ ಎನಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,48,315ಕ್ಕೆ ಏರಿಕೆಯಾಗಿದೆ.

ದೇಶದ ವಿವಿಧೆಡೆ ಇಂದು ಒಟ್ಟು 442 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 18,655ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 14,335 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದೇಶದ ವಿವಿಧೆಡೆ ಈವರೆಗೆ ಒಟ್ಟು 3,94,225 ಮಂದಿ ಆಸ್ಪತ್ರೆಗಳಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 2,35,433 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 7,074 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 295 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿನ ಪ್ರಕರಣಗಳು 2,00,064 ಮುಟ್ಟಿದೆ. ಮೃತರ ಸಂಖ್ಯೆ 8,671 ತಲುಪಿದೆ.

ತಮಿಳುನಾಡಿನಲ್ಲಿ ಹೊಸದಾಗಿ 4280 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,07001 ದಾಟಿದೆ. ಶನಿವಾರ ತಮಿಳುನಾಡಿನ ವಿವಿಧೆಡೆ 65 ಮಂದಿ ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 1450ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ:ತಮಿಳುನಾಡು: ಒಂದು ಲಕ್ಷ ಗಡಿ ದಾಟಿದ ಸೋಂಕು ಪ್ರಕರಣ

ದೆಹಲಿಯಲ್ಲಿ ಒಂದೇ ದಿನ 3000 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜಧಾನಿಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 97,200ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 55 ಸಾವುಗಳು ವರದಿಯಾಗಿದ್ದು, ಮೃತರ ಒಟ್ಟು ಸಂಖ್ಯೆ 3004ಕ್ಕೆ ಏರಿಕೆಯಾಗಿದೆ.

ಗುಜರಾತ್ನಲ್ಲಿ ಒಂದೇ ದಿನ 712 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ 1927 ಮಂದಿ ಮೃತಪಟ್ಟಿದ್ದು, ಒಟ್ಟು 35,398 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಮಧ್ಯಪ್ರದೇಶದಲ್ಲಿ ಒಂದೇ ದಿನ 307 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು 14,604 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಮೃತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.