ಶುಕ್ರವಾರ, ಜುಲೈ 30, 2021
23 °C

Covid-19 India Update | ಒಂದೇ ದಿನ 29,429 ಹೊಸ ಪ್ರಕರಣ, 582 ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 29,429 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 582 ಮಂದಿ ಮೃತಪಟ್ಟಿದ್ದಾರೆ. 

ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,36,181 ಕ್ಕೆ ಏರಿಕೆಯಾಗಿದೆ. ಜೊತೆಗೆ 5,92,032 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಇದುವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 24,309 ಕ್ಕೆ ತಲುಪಿದೆ. ಸದ್ಯ ದೇಶದಲ್ಲಿ 3,19,840 ಸಕ್ರಿಯ ಪ್ರಕರಣಗಳು ಇವೆ. 

ಮಹಾರಾಷ್ಟ್ರದಲ್ಲಿ 2.61 ಲಕ್ಷ ಮಂದಿಗೆ ಸೋಂಕಿಗೆ ತಗುಲಿದ್ದು, 1.45 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 10,482 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 1.43 ಲಕ್ಷ ಮಂದಿಗೆ ಸೋಂಕು ತಗುಲಿದೆ. 92,567 ಮಂದಿ ಗುಣಮುಖರಾಗಿದ್ದು,  2, 032 ಮಂದಿ ಸಾವಿಗೀಡಾಗಿದ್ದಾರೆ. ಇತ್ತ ದೆಹಲಿಯಲ್ಲಿ 1.14 ಲಕ್ಷ ಜನರಿಗೆ ಸೋಂಕು ತಗುಲಿದೆ. 91, 312 ಮಂದಿ ಚೇತರಿಸಿಕೊಂಡಿದ್ದು, 3,411 ಮಂದಿ ಕೊನೆಯುಸಿರೆಳೆದಿದ್ದಾರೆ.

ಕೋವಿಡ್‌ ಸೋಂಕಿತರ ಚೇತರಿಕೆ ಪ್ರಮಾಣ ಶೇಕಡ 63.20 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನಷ್ಟು... 

ಕೋವಿಡ್–19 ಲಸಿಕೆಯ ಮಾನವ ಪ್ರಯೋಗ ಆರಂಭ: ಐಸಿಎಂಆರ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು