ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಬುಧವಾರವೂ ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇನ್ನೂ ಅನೇಕ ರಾಜ್ಯಗಳಲ್ಲಿ ನೂರಾರು ಪ್ರಕರಣಗಳು ದೃಢಪಟ್ಟಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 6,603 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 198 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,23,724 ತಲುಪಿದ್ದು, ಈವರೆಗೆ 9,448 ಜನ ಮೃತಪಟ್ಟಿದ್ದಾರೆ. ಸದ್ಯ 91,065 ಸಕ್ರಿಯ ಪ್ರಕರಣಗಳಿವೆ.

ತಮಿಳುನಾಡಿನಲ್ಲಿ 3,756 ಹೊಸ ಪ್ರಕರಣ ಪತ್ತೆಯಾಗಿದ್ದು, 64 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,22,350ಕ್ಕೆ ಏರಿಕೆಯಾಗಿದ್ದು, ಈವರೆಗೆ 1,700 ಜನ ಅಸುನೀಗಿದ್ದಾರೆ. ಸದ್ಯ 46,480 ಸಕ್ರಿಯ ಪ್ರಕರಣಗಳಿವೆ

ಉಳಿದಂತೆ ಹಿಮಾಚಲ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 1,092ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ 301, ಉತ್ತರಾಖಂಡದಲ್ಲಿ 28, ಪಶ್ಚಿಮ ಬಂಗಾಳದಲ್ಲಿ 986, ಪಂಜಾಬ್ನಲ್ಲಿ 158, ಕರ್ನಾಟಕದಲ್ಲಿ 2,062, ರಾಜಸ್ಥಾನದಲ್ಲಿ 659, ಮಧ್ಯ ಪ್ರದೇಶದಲ್ಲಿ 409 ಹೊಸ ಪ್ರಕರಣಗಳು ದೃಢಪಟ್ಟಿವೆ.

ಇದನ್ನೂ ಓದಿ:Covid-19 Karnataka Update | ಒಂದೇ ದಿನ 2062 ಕೋವಿಡ್ ಪ್ರಕರಣ, 54 ಮಂದಿ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.