ಶನಿವಾರ, ಜುಲೈ 24, 2021
26 °C
ದೇಶದಲ್ಲಿ 34,956 ಹೊಸ ಪ್ರಕರಣ, 687 ಮಂದಿ ಸಾವು

Covid-19 India Update | ದೇಶದಾದ್ಯಂತ 6.3 ಲಕ್ಷ ಮಂದಿ ಗುಣಮುಖ 

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 34,956 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 687 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 

ಇದರೊಂದಿಗೆ ದೇಶದಲ್ಲಿ 10,03,832 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೆ 25,602 ಮಂದಿ ಸಾವಿಗೀಡಾಗಿದ್ದಾರೆ. 

ಇದುವರೆಗೆ 6,35,757 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 3,42,473 ಸಕ್ರಿಯ ಪ್ರಕರಣಗಳು ಇವೆ.

ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 2.76 ಲಕ್ಷ ಜನರಿಗೆ ಸೋಂಕು ತಗುಲಿದೆ. ಇದುವರೆಗೆ 10,928 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 1.52 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, 2,167 ಮಂದಿ ಸಾವಿಗೀಡಾಗಿದ್ದಾರೆ. ಇತ್ತ ರಾಜಧಾನಿ ದೆಹಲಿಯಲ್ಲಿ 1.17 ಲಕ್ಷ ಮಂದಿಗೆ ಸೋಂಕಿ ತಗುಲಿದೆ. ಇದುವರೆಗೆ 3,487 ಮಂದಿ ಕೊನೆಯುಸಿರೆಳೆದಿದ್ದಾರೆ. 

ಗುರುವಾರ ಒಂದೇ ದಿನ ಬೆಂಗಳೂರಿನಲ್ಲಿ 2,344 ಸೇರಿದಂತೆ ರಾಜ್ಯದಲ್ಲಿ 4,169 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೆ 51, 422 ಮಂದಿ ಸೋಂಕು ತಗುಲಿದ್ದು, ಮೃತರ ಸಂಖ್ಯೆ 1,032 ಕ್ಕೆ ಏರಿಕೆಯಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು