ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | 52,050 ಹೊಸ ಕೋವಿಡ್-19 ಪ್ರಕರಣ ದೃಢ, 853 ಮಂದಿ ಸಾವು

Last Updated 4 ಆಗಸ್ಟ್ 2020, 17:02 IST
ಅಕ್ಷರ ಗಾತ್ರ

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ದೇಶದಾದ್ಯಂತ ಇಂದು 52,050 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 853 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ 18,55,746 ಮಂದಿಗೆ ಸೋಂಕು ತಗುಲಿದ್ದು, ಈವರೆಗೆ 38,938 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 12,30,510 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಸದ್ಯ 5,86,298 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 4,41,228 ಜನರಿಗೆ ಸೋಂಕು ತಗುಲಿದೆ. 1,48,843 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 2,76,809 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 15,576 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ಈವರೆಗೂ 2,57,613 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 1,96,483 ಮಂದಿ ಗುಣಮುಖರಾಗಿದ್ದಾರೆ. 56,998 ಸಕ್ರಿಯ ಪ್ರಕರಣಗಳಿದ್ದು, 4,132 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ.

ಆಂದ್ರ ಪ್ರದೇಶದಲ್ಲೂ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಈವರೆಗೂ 1,58,764 ಜನರಿಗೆ ಸೋಂಕು ತಗುಲಿದೆ. 74,404 ಸಕ್ರಿಯ ಪ್ರಕರಣಗಳೊಂದಿಗೆ 82,886 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1,474 ಜನರು ಸಾವಿಗೀಡಾಗಿದ್ದಾರೆ.

ಇತ್ತ ರಾಜಧಾನಿ ದೆಹಲಿಯಲ್ಲಿ 1,37,677 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದುವರೆಗೆ 4,004 ಮಂದಿ ಕೊನೆಯುಸಿರೆಳೆದಿದ್ದಾರೆ. 10,356 ಸಕ್ರಿಯ ಪ್ರಕರಣಗಳೊಂದಿಗೆ 1,23,317 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಈವರೆಗೂ 92,921 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, 53,168 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 38,023 ಸಕ್ರಿಯ ಪ್ರಕಗಳೊಂದಿಗೆ ಒಟ್ಟಾರೆ 1,730 ಜನರು ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಗುತರಾತ್‌ನಲ್ಲಿ 2,486, ಪಶ್ಚಿಮ ಬಂಗಾಳದಲ್ಲಿ 1,678, ಉತ್ತರ ಪ್ರದೇಶ 1,730, ಮಧ್ಯ ಪ್ರದೇಶ 886 ಮತ್ತು ರಾಜಸ್ಥಾನದಲ್ಲಿ 703 ಜನರು ಕೊರೊನಾ ವೈರಸ್‌ನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT