ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | 37,724 ಹೊಸ ಕೋವಿಡ್-19 ಪ್ರಕರಣ ದೃಢ, 648 ಮಂದಿ ಸಾವು

ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 37,724 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 648 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ 11,92,915 ಮಂದಿಗೆ ಸೋಂಕು ತಗುಲಿದ್ದು, 28,732 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 7,53,050 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 4,11,133 ಸಕ್ರಿಯ ಪ್ರಕರಣಗಳು ಇವೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 3,27,031 ಜನರಿಗೆ ಸೋಂಕು ತಗುಲಿದೆ. 1,32,538 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 1,82,217 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 12,276 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 1,80,643 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 1,26,670 ಮಂದಿ ಗುಣಮುಖರಾಗಿದ್ದಾರೆ. 51,347 ಸಕ್ರಿಯ ಪ್ರಕರಣಗಳಿದ್ದು, 2,626 ಮಂದಿ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾಗಿದ್ದಾರೆ.

ಇತ್ತ ರಾಜಧಾನಿ ದೆಹಲಿಯಲ್ಲಿ 1,25,096 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದುವರೆಗೆ 3,690 ಮಂದಿ ಕೊನೆಯುಸಿರೆಳೆದಿದ್ದಾರೆ. 15,288 ಸಕ್ರಿಯ ಪ್ರಕರಣಗಳೊಂದಿಗೆ 1,06,118 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಗುಜರಾತಿನಲ್ಲಿ ಈವರೆಗೂ 50,379 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, 36,423 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 11,760 ಸಕ್ರಿಯ ಪ್ರಕಗಳೊಂದಿಗೆ ಒಟ್ಟಾರೆ 2,196 ಜನರು ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಪಶ್ಚಿಮ ಬಂಗಾಳದಲ್ಲಿ 1,182, ಉತ್ತರ ಪ್ರದೇಶದ 1,229, ಮಧ್ಯ ಪ್ರದೇಶದ 756, ರಾಜಸ್ಥಾನದಲ್ಲಿ 577 ಮತ್ತು ಆಂಧ್ರ ಪ್ರದೇಶದಲ್ಲಿ 758 ಜನರು ಕೊರೊನಾ ವೈರಸ್‌ನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT