ಶುಕ್ರವಾರ, ಸೆಪ್ಟೆಂಬರ್ 17, 2021
26 °C

N-95 ಮಾಸ್ಕ್ ಬಳಕೆಯಿಂದ ಕೊರೊನಾ ಸೋಂಕು ತಡೆಯಲು ಸಾಧ್ಯವಿಲ್ಲ: ಆರೋಗ್ಯ ಸಚಿವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಗಾಳಿ ನಿಯಂತ್ರಣ ಕವಟವಿರುವ  N-95 ಮಾಸ್ಕ್ ಧರಿಸುವುದರಿಂದ ಕೊರೊನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು N-95 ಮಾಸ್ಕ್ ಬಳಸುವವರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನಿಡಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ಮಹಾನಿರ್ದೇಶಕ ರಾಜೀವ್ ಗರ್ಗ್ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅಧಿಕೃತ ಆರೋಗ್ಯ ಕಾರ್ಯಕರ್ತರು, ವೈದ್ಯರ ಬದಲಿಗೆ ಸಾರ್ವಜನಿಕರು N-95 ಮಾಸ್ಕ್‌ಗಳನ್ನು ಸರಿಯಾದ ಕ್ರಮದಲ್ಲಿ ಬಳಕೆ ಮಾಡುತ್ತಿಲ್ಲ ಎಂಬ ಅಂಶ ತಮ್ಮ ಗಮನಕ್ಕೆ ಬಂದಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮನೆಯಲ್ಲಿ ಮಾಸ್ಕ್‌ ತಯಾರಿಸಿ, ಬಳಸುವ ವಿಧಾನದ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಮಾಹಿತಿಯನ್ನು ಜನರ ಗಮನಕ್ಕೆ ತರುವಂತೆ ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ.

N-95 ಮಾಸ್ಕ್ ಧರಿಸುವುದರಿಂದ ಕೊರೊನಾ ವೈರಸ್ ದೇಹದೊಳಗೆ ಸೇರುವುದನ್ನು ಅಥವಾ ಸೋಂಕಿತ ವ್ಯಕ್ತಿಯ ದೇಹದಿಂದ ಹೊರಗೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದಿರುವ ಆರೋಗ್ಯ ಸಚಿವಾಲಯ ಈ ಮಾಸ್ಕ್ ಬಳಕೆಗೆ ಮಾರ್ಗಸೂಚಿ ಅಗತ್ಯವಿದೆ ಎಂದು ಹೇಳಿದೆ.

ಮನೆಯಲ್ಲಿಯೇ ಸರಳವಾಗಿ ಮಾಸ್ಕ್‌ ತಯಾರಿಸಬಹುದು. ಉಪಯೋಗಿಸಿದ ಹತ್ತಿ ಬಟ್ಟೆಯನ್ನು ಇದಕ್ಕೆ ಬಳಕೆ ಮಾಡಬಹುದು. ಇಂತಹ ಮಾಸ್ಕ್‌ ಅಥವಾ ಮುಖದ ಬಟ್ಟೆಗಳನ್ನು ಪ್ರತಿ ದಿನ ಬಿಸಿ ನೀರಿನಲ್ಲಿ ತೊಳೆಯಬೇಕು. ನೀರಿಗೆ ಸ್ವಲ್ಪ ಉಪ್ಪು ಬೆರೆಸಿ ಕುದಿಸುವುದು ಉತ್ತಮ. ತೊಳೆದ ಮಾಸ್ಕ್‌ಗಳನ್ನು ಚೆನ್ನಾಗಿ ಬಿಸಿಲಿನಲ್ಲಿ ಒಣಗಿಸಿ ಉಪಯೋಗಿಸಬೇಕು.

ಪ್ರತಿಯೊಬ್ಬರು ಮಾಸ್ಕ್ ಅಥವಾ ಮುಖದ ಬಟ್ಟೆಯನ್ನು ಪ್ರತ್ಯೇಕವಾಗಿಯೇ ಉಪಯೋಗಿಸಬೇಕು. ಒಬ್ಬರು ಉಪಯೋಗಿಸಿರುವುದನ್ನು ಮತ್ತೊಬ್ಬರು ಬಳಕೆ ಮಾಡಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು