ಶುಕ್ರವಾರ, ಜುಲೈ 23, 2021
22 °C

Covid-19 India Update: ಒಂದೇ ದಿನ 22,752 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಭಾರತದ ವಿವಿಧ ರಾಜ್ಯಗಳಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 22,752 ಹೊಸ ಪ್ರಕರಣಗಳು ವರದಿಯಾಗಿವೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,91,886 ಮುಟ್ಟಿದೆ.

ಒಂದು ದಿನದ ಅವಧಿಯಲ್ಲಿ ಒಟ್ಟು 482 ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 20,642ಕ್ಕೆ ಏರಿದೆ. ಈವರೆಗೆ ಒಟ್ಟು 4,56,831 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ 61.52 ಇದೆ.

ಮಹಾರಾಷ್ಟ್ರದಲ್ಲಿ ಒಂದು ದಿನದ ಅವಧಿಯಲ್ಲಿ 5,134 ಹೊಸ ಪ್ರಕರಣಗಳು ವರದಿಯಾಗಿವೆ. ಆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2,17,121ಕ್ಕೆ ಏರಿಕೆಯಾಗಿದೆ. ಒಂದೇ ದಿನ 224 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 9,250ಕ್ಕೆ ಏರಿಕೆಯಾಗಿದೆ.

ತಮಿಳುನಾಡಿನಲ್ಲಿ 1,18,584, ದೆಹಲಿಯಲ್ಲಿ 1,02,831, ಗುಜರಾತ್‌ನಲ್ಲಿ 37,550 ಮತ್ತು ಉತ್ತರ ಪ್ರದೇಶದಲ್ಲಿ 29,968 ಮಂದಿ ಸೋಂಕಿತರಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಒಂದೇ ದಿನ 1,322 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಒಟ್ಟು ಸಂಖ್ಯೆ 21,197ಕ್ಕೆ ಮುಟ್ಟಿದೆ.

ತೆಲಂಗಾಣದಲ್ಲಿ ಒಂದೇ ದಿನ 1,831 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಒಟ್ಟು ಸಂಖ್ಯೆ 25,733 ಮುಟ್ಟಿದೆ. ಈವರೆಗೆ 306 ಮಂದಿ ಮೃತಪಟ್ಟಿದ್ದಾರೆ.

ಮುಂಬೈನಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದಿದ್ದರೂ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ. ಪುಣೆಯಲ್ಲಿ ಜನಪ್ರತಿನಿಧಿಗಳು ಮತ್ತೆ ಲಾಕ್‌ಡೌನ್ ಮಾಡಲು ಒತ್ತಾಯಿಸಿದ್ದಾರೆ. ತೆಲಂಗಾಣದಲ್ಲಿ ಖಾಸಗಿ ಆಸ್ಪತ್ರೆಗಳು ಜನರನ್ನು ಸುಲಿಗೆ ಮಾಡದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಹೈಕೋರ್ಟ್‌ ಸೂಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು