ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನ ಅರ್ಧದಷ್ಟು ಕೊಳೆಗೇರಿ ನಿವಾಸಿಗಳಿಗೆ ಕೋವಿಡ್‌: ಸಮೀಕ್ಷೆಯಲ್ಲಿ ಬಹಿರಂಗ

Last Updated 29 ಜುಲೈ 2020, 3:17 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಅರ್ಧದಷ್ಟು ಜನರು ಕೊರೊನಾ ಸೋಂಕು ಹೊಂದಿದ್ದಾರೆ ಎಂದು ಮಂಗಳವಾರ ಬಿಡುಗಡೆ ಮಾಡಲಾಗಿರುವ ಸಮೀಕ್ಷೆಯಿಂದ ತಿಳಿದುಬಂದಿದೆ.

ಈ ಸಮೀಕ್ಷೆಯ ಪ್ರಕಾರ ಅವಲೋಕಿಸುವುದಾದರೆ, ಭಾರತದಲ್ಲಿ ಅಧಿಕೃತವಾಗಿ ಪ್ರಕಟಗೊಳ್ಳುತ್ತಿರುವ ಕೊರೊನಾ ಪ್ರಕರಣಗಳ ಅಂಕಿ-ಅಂಶದ ಬಗ್ಗೆ ಹೊಸ ಅನುಮಾನಗಳು ಹುಟ್ಟಿಕೊಂಡಿವೆ.

ಅಮೆರಿಕಾ ಮತ್ತು ಬ್ರೆಜಿಲ್ ನಂತರ ಭಾರತವು ಮೂರನೇ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರವಾಗಿದೆ. ಭಾರತದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 15 ಲಕ್ಷ ದಾಟಿದೆ. ಆದರೂ, ಪರೀಕ್ಷೆಯ ಕೊರತೆಯಿಂದಾಗಿ ದೇಶದಲ್ಲಿ ನಿಜವಾದ ಪ್ರಕರಣಗಳ ಪ್ರಮಾಣ ಬೆಳಕಿಗೆ ಬರುತ್ತಿಲ್ಲವೆಂಬ ತಜ್ಞರು ಈ ಹಿಂದೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಮುಂಬೈ ಮಹಾನಗರದಲ್ಲಿ ನಡೆದ ಅಧ್ಯಯನದ ಮಾಹಿತಿಗಳು ತಜ್ಞರ ಅಭಿಪ್ರಾಯಕ್ಕೆ ಇಂಬು ನೀಡಿವೆ.

ಮುಂಬೈ ಮಹಾನಗರ ಪಾಲಿಕೆಯ ಅಧಿಕಾರಿಗಳು ಒಟ್ಟು 6,936 ಜನರ ರ‍್ಯಾಂಡಮ್ ಪರೀಕ್ಷೆ ನಡೆಸಿದ್ದಾರೆ. ಇದರಲ್ಲಿ ಶೇ 57ರಷ್ಟು ಕೊಳಗೇರಿ ನಿವಾಸಿಗಳು ಮತ್ತು ಶೇ 16ರಷ್ಟು ಕೊಳೆಗೇರಿಯಲ್ಲಿ ವಾಸಿಸದ ನಿವಾಸಿಗಳು ಕೋವಿಡ್‌ ಹೊಂದಿದ್ದಾರೆಂದು ಅಂದಾಜಿಸಲಾಗಿದೆ.

ಮುಂಬೈ ನಗರದಲ್ಲಿ ಶೇ 40ರಷ್ಟು ಜನರು ಕೊಳೆಗೇರಿಗಳಲ್ಲಿ ವಾಸಿಸುತ್ತಿದ್ದು, ಇದುವರೆಗೆ 1,10,000 ಪ್ರಕರಣಗಳು ಮತ್ತು 6,000 ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ.

ಸುಮಾರು ಎರಡು ಕೋಟಿ ಜನರಿರುವ ಮುಂಬೈ ಮಹಾನಗರದ ದೊಡ್ಡ ಕೊಳಗೇರಿ ದಾರಾವಿ ಒಂದರಲ್ಲೇ 10 ಲಕ್ಷಕ್ಕೂ ಅಧಿಕ ಜನರು ನೆಲೆ ಕಂಡುಕೊಂಡಿದ್ದಾರೆ. ಆದರೆ, ಈ ವರೆಗೂ ಮುಂಬೈನ ಕೊಳೆಗೇರಿಗಳಲ್ಲಿ ಹೆಚ್ಚಿನ ಸಾವುಗಳು ವರದಿಯಾಗಿಲ್ಲ. ಸೋಂಕು ಹರಡುವಿಕೆ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದ್ದೇ ಇದಕ್ಕೆ ಕಾರಣವೆಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT