ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಪ್ರವೇಶ ಪರೀಕ್ಷೆ ಬರೆದ ಇಬ್ಬರಿಗೆ ಕೋವಿಡ್‌

Last Updated 21 ಜುಲೈ 2020, 12:02 IST
ಅಕ್ಷರ ಗಾತ್ರ

ತಿರುವನಂತಪುರ: ಕಳೆದ ವಾರ ನಡೆದ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಮತ್ತು ಪೋಷಕರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಇದೇ 16ರಂದು ನಡೆದ ಪರೀಕ್ಷೆಯಲ್ಲಿ ತಿರುವನಂತಪುರದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಒಬ್ಬ ವಿದ್ಯಾರ್ಥಿಯ ತಂದೆಗೆ ಕೋವಿಡ್‌ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಸೋಂಕಿತ ವಿದ್ಯಾರ್ಥಿಗಳ ಜೊತೆಗಿದ್ದ ಎಲ್ಲರನ್ನು ಪತ್ತೆಹಚ್ಚಲು ಆರಂಭಿಸಿದೆ.

ರಾಜ್ಯ ಸರ್ಕಾರವನ್ನು ಸಾರ್ವಜನಿಕರುಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ದಟ್ಟಣೆ ಇರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದರಿಂದ ಸರ್ಕಾರವೂ ಮುಜುಗರಕ್ಕೊಳಗಾಗಿದೆ.

ಪ್ರವೇಶ ಪರೀಕ್ಷೆಯನ್ನು ಸುಮಾರು ಒಂದು ಲಕ್ಷ ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇವರಲ್ಲಿ ಶೇ 85ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಕೋವಿಡ್‌ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಇದಲ್ಲದೇ ಮೂವರು ಸೋಂಕಿತ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿಯೇ ಪರೀಕ್ಷೆ ಬರೆಯುವ ಅವಕಾಶವನ್ನೂ ನೀಡಲಾಗಿತ್ತು. ಪ್ರವೇಶ ಪರೀಕ್ಷೆ ಆಯೋಜನೆಗೂ ಮೊದಲು ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯನ್ನು ಸರ್ಕಾರ ಯಶಸ್ವಿಯಾಗಿ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT