ಬುಧವಾರ, ಆಗಸ್ಟ್ 4, 2021
24 °C

Covid-19 India Update | 7.2 ಲಕ್ಷ ಸೋಂಕಿತರು, 20ಸಾವಿರ ದಾಟಿದ ಸಾವಿನ ಸಂಖ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೋಮವಾರ ಒಂದೇ ದಿನ ಒಟ್ಟು 22,252 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಇದುವರೆಗೆ ಒಟ್ಟು 7,19,665 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 4,39,947 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 20,160 ಮಂದಿ ಮೃತಪಟ್ಟಿದ್ದು, ಇನ್ನೂ 2,59,557 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 5,368 ಹೊಸ ಪ್ರಕರಣಗಳು ವರದಿಯಾಗಿದ್ದು, 204 ಜನ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,11,987 ತಲುಪಿದ್ದು, ಮೃತಪಟ್ಟವರ ಸಂಖ್ಯೆಯ 9,026ಕ್ಕೆ ಏರಿಕೆಯಾಗಿದೆ.

ತಮಿಳುನಾಡಿನಲ್ಲಿ 3,827 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 61 ಸಾವು ಸಂಭವಿಸಿದೆ. ಒಟ್ಟು ಸೋಂಕಿತರ ಸಂಖ್ಯೆ 1,14,978ಕ್ಕೆ ಏರಿಕೆಯಾಗಿದೆ. ಈವರೆಗೆ 1,571 ಮಂದಿ ಅಸುನೀಗಿದ್ದಾರೆ.

ದೆಹಲಿಯಲ್ಲಿ 1,379 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 48 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,00,823 ತಲುಪಿದ್ದು, ಸಾವಿನ ಸಂಖ್ಯೆ 3,115 ತಲುಪಿದೆ.

ಕರ್ನಾಟಕದಲ್ಲಿ ಸೋಮವಾರ ಸಂಜೆ 5ರ ವೇಳೆಗೆ ಸೋಂಕಿತರ ಸಂಖ್ಯೆ 25,317ಕ್ಕೆ ತಲುಪಿದ್ದು, 401 ಮಂದಿ ಮೃತಪಟ್ಟಿದ್ದಾರೆ. 14,385 ಸಕ್ರಿಯ ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು