ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ ಒಂದೇ ದಿನ 24,850 ಪ್ರಕರಣ

ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 24,850 ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 613 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಒಂದೇ ದಿನ ಅತಿ ಹೆಚ್ಚು ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 6,73,165 ಮುಟ್ಟಿದೆ. ಈ ವರೆಗೂ ಸೋಂಕಿಗೆ ಚಿಕಿತ್ಸೆ ಪಡೆದು 4,09,083 ಮಂದಿ ಗುಣಮುಖರಾಗಿದ್ದಾರೆ.

ಪ್ರಸ್ತುತ 2,44,814 ಜನರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 19,268 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಜುಲೈ 4ರ ವರೆಗೂ ದೇಶದಲ್ಲಿ 97,89,066 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ತಿಳಿಸಿದೆ.

ಕೋವಿಡ್‌-19ನ ಹೊಡೆತಕ್ಕೆ ತೀವ್ರವಾಗಿ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 2,00,064 ಪ್ರಕರಣಗಳು ದಾಖಲಾಗಿದ್ದು, 83,311 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 1,08,082 ಮಂದಿ ಗುಣಮುಖರಾಗಿದ್ದು, 8,671 ಜನರು ಮೃತರಾಗಿದ್ದಾರೆ.

ಗುಜರಾತ್‌ನಲ್ಲಿ ಒಟ್ಟಾರೆ 35,312 ಜನರಿಗೆ ಸೋಂಕು ತಗುಲಿದೆ. 7,981 ಸಕ್ರಿಯ ಪ್ರಕರಣಗಳಿದ್ದು, 25,406 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,925 ಜನರು ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಒಟ್ಟಾರೆ 97,200 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 25,940ಸಕ್ರಿಯ ಪ್ರಕರಣಗಳಿದ್ದು, 68,256 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 3,004 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ಒಟ್ಟಾರೆ 1,07,001 ಮಂದಿಗೆ ಸೋಂಕು ತಗುಲಿದ್ದು, 44,959 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 60,592 ಮಂದಿ ಗುಣಮುಖರಾಗಿದ್ದು, 1,450 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 598, ಪಶ್ಚಿಮ ಬಂಗಾಳದಲ್ಲಿ 763, ಉತ್ತರ ಪ್ರದೇಶದಲ್ಲಿ 773 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 21,549 ಪ್ರಕರಣಗಳು ದಾಖಲಾಗಿದ್ದು, 335 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 11,970 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 9,244 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT