ಗುರುವಾರ , ಸೆಪ್ಟೆಂಬರ್ 23, 2021
27 °C

ಕೊರೊನಾ: ನೀಟ್ ಪರೀಕ್ಷೆ ಸೆಪ್ಟೆಂಬರ್ 13ಕ್ಕೆ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

NEET JEE exams

ನವದೆಹಲಿ: ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಸೆಪ್ಟೆಂಬರ್‌ಗೆ ಮುಂದೂಡಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್‌ಆರ್‌ಡಿ) ಶುಕ್ರವಾರ ತಿಳಿಸಿದೆ. 

‘ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಹಾಗೂ ಗುಣಮಟ್ಟದ ಶಿಕ್ಷಣ ಖಾತರಿಪಡಿಸಿಕೊಳ್ಳಲು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಿದ್ದೇವೆ. ಜೆಇಇ ಮೈನ್ ಪರೀಕ್ಷೆಗಳು ಸೆಪ್ಟೆಂಬರ್ 1–6ರ ನಡುವೆ ನಡೆಯಲಿದೆ. ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆ ಸೆಪ್ಟೆಂಬರ್‌ 27ಕ್ಕೆ ಆಯೋಜಿಸಲಾಗುವುದು. ನೀಟ್ ಪರೀಕ್ಷೆಯನ್ನು ಸೆಪ್ಟೆಂಬರ್ 13ರಂದು ನಡೆಸಲಾಗುವುದು’ ಎಂದು ಎಚ್‌ಆರ್‌ಡಿ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ನೀಟ್ ಪರೀಕ್ಷೆಯನ್ನು ಜುಲೈ 26ರಂದು ನಡೆಸುವುದೆಂದು ಈ ಹಿಂದೆ ನಿಗದಿಪಡಿಸಲಾಗಿತ್ತು. ಜೆಇಇ ಮೈನ್ಸ್‌ ಅನ್ನು ಜುಲೈ 18ರಿಂದ 23ರ ವರೆಗೆ ನಡೆಸುವುದೆಂದು ಈ ಹಿಂದೆ ನಿಗದಿಯಾಗಿತ್ತು.

ಐಐಟಿಗಳಿಗೆ ನಡೆಸುವ ಜೆಇಇ ಅಡ್ವಾನ್ಸ್ಡ್ ಅನ್ನು ಆಗಸ್ಟ್ 23ಕ್ಕೆ ನಿಗದಿಪಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು