ಸುಕ್ಮಾ (ಛತ್ತೀಸಗಡ): ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧನೊಬ್ಬನನ್ನು ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಬಂಧಿಸಲಾಗಿದೆ.

ತನ್ನ ಮೇಲೆಅತ್ಯಾಚಾರವೆಸಗಲಾಗಿದೆ ಎಂದು ಸಂತ್ರಸ್ತ ಬಾಲಕಿ ಹಾಗೂ ಆಕೆಯ ಕುಟುಂಬದವರು ದೊರ್ನಾಪಾಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

‘ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ದೂರು ದಾಖಲಾಗಿದ್ದು, ಅದರ ಆಧಾರದಲ್ಲಿ ತಕ್ಷಣವೇ ಎಫ್‌ಐಆರ್ ದಾಖಲಿಸಿದ್ದೆವು. ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ’ ಎಂದು ಸುಕ್ಮಾ ಉಪ ವಿಭಾಗೀಯ ಅಧಿಕಾರಿ ಪೊಲೀಸ್ (ಎಸ್‌ಡಿಒಪಿ)ಅಖಿಲೇಶ್ ಕೌಶಿಕ್ ತಿಳಿಸಿದ್ದಾರೆ.

ಘಟನೆ ಕುರಿತುಮಾತನಾಡಿರುವ ಬುಡಕಟ್ಟು ಸಮುದಾಯದ ನಾಯಕ ಮಂಗಲ್ ರಾಮ್, ‘ಬಾಲಕಿಯು ಹಸುಗಳನ್ನು ಮೇಯಿಸಲು ಸ್ನೇಹಿತೆ ಜೊತೆ ಸೋಮವಾರ ಕಾಡಿಗೆ ಹೋಗಿದ್ದಳು. ಈ ವೇಳೆ ಶಿಬಿರದಿಂದ ಹೊರಬಂದ ಸಿಆರ್‌ಪಿಎಫ್ ಯೋಧ, ಕಿರುಕುಳ ನೀಡಲು ಆರಂಭಿಸಿದ. ಈ ವೇಳೆ ಆಕೆಯ ಜೊತೆಗಿದ್ದವರು ತಪ್ಪಿಸಿಕೊಂಡು ಓಡಿಹೋಗಿದ್ದು, ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ’ ಎಂದು ವಿವರಿಸಿದ್ದಾರೆ.

ಮುಂದುವರಿದು,‘ಬಳಿಕ ಗ್ರಾಮಕ್ಕೆ ವಾಪಸ್ ಆದ ಬಾಲಕಿ ಘಟನೆಯ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಆದರೆ, ಮರುದಿನ ತನ್ನ ತಾಯಿಯೊಂದಿಗೆ ಹೇಳಿಕೊಂಡಿದ್ದಳು. ಬಳಿಕ ವಿಷಯ ಬೆಳಕಿಗೆ ಬಂದಿದೆ’ ಎಂದು ಹೇಳಿದ್ದಾರೆ.

ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದುಆದಿವಾಸಿ ಮಹಾಸಭಾ ಒತ್ತಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.