ಮಂಗಳವಾರ, ಆಗಸ್ಟ್ 3, 2021
21 °C

ಫುಲ್ವಾಮಾ–ಶ್ರೀನಗರ ರಸ್ತೆಯಲ್ಲಿ ಸ್ಫೋಟ: ಸಿಆರ್‌ಪಿಎಫ್‌ ಸಿಬ್ಬಂದಿಗೆ ಗಾಯ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಸ್ಫೋಟ ಸಂಭವಿಸಿರುವ ಸ್ಥಳದ ಸಮೀಪ ಶೋಧ ಕಾರ್ಯದಲ್ಲಿರುವ ಭದ್ರತಾ ಸಿಬ್ಬಂದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, ಭದ್ರತಾ ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಭದ್ರತಾ ಪಡೆಗಳು ಪುಲ್ವಾಮಾದ ಗಾಂಗೂ ಪ್ರದೇಶದಲ್ಲಿ ಸಾಗುತ್ತಿರುವುದಾಗಿ ಸ್ಫೋಟ ಸಂಭವಿಸಿದೆ. ಸ್ಫೋಟದ ಬಳಿಕ ಭದ್ರತಾ ಪಡೆಗಳು ಕೆಲವು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸಿಆರ್‌ಪಿಎಫ್‌ನ ಯೋಧರೊಬ್ಬರು ಗಾಯಗೊಂಡಿದ್ದಾರೆ.

ಉಗ್ರರು ಸುಧಾರಿತ ಸ್ಫೋಟಕ ಸಾಧಕದ (ಐಇಡಿ) ಬಳಸಿ ದಾಳಿ ಮಾಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆದಿದೆ.

ಕಳೆದ ನಾಲ್ಕು ದಿನಗಳಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ನಡೆದಿರುವ ಎರಡನೇ ದಾಳಿ ಇದಾಗಿದೆ. ಬುಧವಾರ ಸಪೋರ್‌ನಲ್ಲಿ ಸಿಆರ್‌ಪಿಎಫ್‌ ಯೋಧ ಮತ್ತು ನಾಗರಿಕರೊಬ್ಬರು ಉಗ್ರರ ಗುಂಡಿನ ದಾಳಿಯಿಂದ ಸಾವಿಗೀಡಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು