ಶನಿವಾರ, ಜುಲೈ 31, 2021
21 °C

ಜಮ್ಮು–ಕಾಶ್ಮೀರ: ಅಮರನಾಥನ ದರ್ಶನ ಪಡೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Defence Minister Rajnath Singh, Chief of Defence Staff General Bipin Rawat, and Army Chief General MM Naravane offered prayers at Amarnath Temple

ಶ್ರೀನಗರ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಅಮರನಾಥ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಸಹ ಸಚಿವರ ಜತೆಗೆ ದೇಗುಲಕ್ಕೆ ಭೇಟಿ ನೀಡಿದ್ದಾರೆ.

ಜಮ್ಮು–ಕಾಶ್ಮೀರದ ಪವಿತ್ರ ಗುಹೆಯಲ್ಲಿ ಅಮರನಾಥನಿಗೆ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಸಚಿವರು ಸುಮಾರು ಒಂದು ಗಂಟೆ ಅಮರನಾಥ ದೇಗುಲದಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.

ಸದ್ಯ ಜಮ್ಮು–ಕಾಶ್ಮೀರ ಪ್ರವಾಸದಲ್ಲಿರುವ ಸಚಿವರು ಶುಕ್ರವಾರ ಉನ್ನತ ಸೇನಾಧಿಕಾರಿಗಳ ಜತೆ ಮಾತುಕತೆ ನಡೆಸಿ ರಾಜ್ಯದಲ್ಲಿನ ಒಟ್ಟಾರೆ ಭದ್ರತಾ ಸನ್ನಿವೇಶದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಪಾಕಿಸ್ತಾನದ ದುಷ್ಕೃತ್ಯಗಳಿಗೆ ತಕ್ಕ ತಿರುಗೇಟು ನೀಡುವಂತೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದ ಜತೆಗಿನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಒಸಿ) ಕಟ್ಟುನಿಟ್ಟಿನ ಕಣ್ಗಾವಲು ಮತ್ತು ಎಚ್ಚರಿಕೆ ವಹಿಸುವಂತೆಯೂ ಸಚಿವರು ಮಾತುಕತೆ ವೇಳೆ ಸಶಸ್ತ್ರ ಪಡೆಗಳಿಗೆ ಸೂಚಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು