ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಡಾಖ್‌–ಕಾಶ್ಮೀರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್

Last Updated 17 ಜುಲೈ 2020, 2:42 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಲಡಾಖ್‌ ಮತ್ತು ಜಮ್ಮು–ಕಾಶ್ಮೀರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಲೇಹ್‌ಗೆ ತೆರಳಿದ್ದಾರೆ.

ಇಂದು ಲಡಾಖ್‌ಗೆ ಭೇಟಿ ನೀಡಲಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅವರು ರಾಜನಾಥ್‌ಗೆ ಸಾಥ್‌ ನೀಡಲಿದ್ದಾರೆ. ಜೊತೆಗೆ, ನಾಳೆ ಶ್ರೀನಗರಕ್ಕೆ ಭೇಟಿ ನೀಡಲಿರುವುದಾಗಿ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ಗಡಿಯಲ್ಲಿನ ಪರಿಸ್ಥಿತಿ ಪರಿಶೀಲಿಸಲು ಲಡಾಖ್‌ ಮತ್ತು ಜಮ್ಮು–ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದೇನೆ. ಈ ಪ್ರದೇಶಗಳಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸುತ್ತೇನೆ’ ಎಂದು ರಾಜನಾಥ್‌ ಸಿಂಗ್‌ ಪ್ರತಿಕ್ರಿಯೆ ನೀಡಿದ್ದಾರೆ.

ಜುಲೈ 3ರಂದು ಪ್ರಧಾನಿ ನರೇಂದ್ರ ಮೋದಿ ಲಡಾಖ್‌ಗೆ ಭೇಟಿ ನೀಡಿ ಸೇನಾ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದ್ದರು.

ಜೂನ್ 15ರಂದು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆ ಪ್ರದೇಶದಲ್ಲಿ ಚೀನಾ ಪಡೆಗಳೊಂದಿಗೆ ನಡೆದಿದ್ದ ಸಂಘರ್ಷದಲ್ಲಿ ಕರ್ನಲ್ ಶ್ರೇಣಿಯ ಅಧಿಕಾರಿ ಸೇರಿ 20 ಮಂದಿ ಯೋಧರು ಹುತಾತ್ಮರಾಗಿದ್ದರು. ಆ ಬಳಿಕ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ವಾಯುಪಡೆ ಹೆಚ್ಚಿನ ಯುದ್ಧವಿಮಾನಗಳನ್ನು ಮುಂಚೂಣಿ ನೆಲೆಗಳಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT