ಸೋಮವಾರ, ಜುಲೈ 26, 2021
26 °C

ಡಿಎಸ್‌ಜಿಎಂಸಿ: ಕೋವಿಡ್‌ ರೋಗಿಗಳಿಗಾಗಿ ಉಚಿತ ಆಂಬುಲೆನ್ಸ್‌‌ ಸೇವೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯ ಸಿಖ್‌ ಗುರುದ್ವಾರ ನಿರ್ವಹಣಾ ಸಮಿತಿಯು (ಡಿಎಸ್‌ಜಿಎಂಸಿ) ಕೋವಿಡ್‌ ರೋಗಿಗಳಿಗಾಗಿ ಉಚಿತ ಆಂಬುಲೆನ್ಸ್‌ ಸೇವೆಯನ್ನು ಆರಂಭಿಸಿದೆ. 

ಅತ್ಯಾಧುನಿಕ ವೈದ್ಯಕೀಯ ಸೌಕರ್ಯಗಳನ್ನೊಳಗೊಂಡ 12 ಆಂಬುಲೆನ್ಸ್‌‌ಗಳನ್ನು ಮೊದಲ ಹಂತದಲ್ಲಿ ಸೇವೆಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನಷ್ಟು ಆಂಬುಲೆನ್ಸ್‌ಗಳನ್ನು ನೀಡಲಾಗುವುದು. ಸದ್ಯ ಉಚಿತ ಆಂಬುಲೆನ್ಸ್‌ ಸೇವೆಯು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಮತ್ತು ಕೇಂದ್ರ ದೆಹಲಿಯಲ್ಲಿ ಲಭ್ಯವಿದೆ ಎಂದು ಡಿಎಸ್‌ಜಿಎಂಸಿ ಅಧ್ಯಕ್ಷ ಮಜಿಂದರ್‌ ಸಿಂಗ್‌ ಸಿರ್ಸಾ ಅವರು ತಿಳಿಸಿದರು.

ಇದಕ್ಕೂ ಮುನ್ನ ಡಿಎಸ್‌ಜಿಎಂಸಿಯು, ಕೋವಿಡ್ ಕಾರ್ಯದಲ್ಲಿ ನಿರತರಾಗಿರುವ ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ 200ಕ್ಕೂ ಹೆಚ್ಚು ವೈದ್ಯರಿಗೆ ಉಚಿತ ವಸತಿ ಸೌಲಭ್ಯವನ್ನು ಒದಗಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು