ಶನಿವಾರ, ಜನವರಿ 16, 2021
19 °C

ಕೋವಿಡ್ ಆಸ್ಪತ್ರೆ; ಸ್ಥಳ ಪರಿಶೀಲಿಸಿದ ಡಿಆರ್‌ಡಿಒ ತಂಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ನವದೆಹಲಿಯಲ್ಲಿರುವಂತೆ ಪಟ್ನಾ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲೂ ಕೋವಿಡ್‌ 19 ರೋಗಿಗಳ ಚಿಕಿತ್ಸೆಗಾಗಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಕ್ಕೆ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮುಂದಾಗಿದೆ.

ತಾತ್ಕಾಲಿಕ ಆಸ್ಪತ್ರೆ ನಿರ್ಮಾಣದ ಸಂಬಂಧ ಸ್ಥಳ ಪರಿಶೀಲನೆಗಾಗಿ ಸೋಮವಾರ ಡಿಆರ್‌ಡಿಒ ಅಧಿಕಾರಿಗಳ ತಂಡ ಪಟ್ನಾಕ್ಕೆ ಭೇಟಿ ನೀಡಿತ್ತು. ಇಲ್ಲಿ 500 ಹಾಸಿಗೆಗಳ ಸಾಮರ್ಥ್ಯದ ತಾತ್ಕಾಲಿಕ ‘ಕೋವಿಡ್‌ 19‘ ಆಸ್ಪತ್ರೆ ನಿರ್ಮಿಸಲು ಡಿಆರ್‌ಡಿಒ ತೀರ್ಮಾನಿಸಿದೆ.

ಡಿಆರ್‌ಡಿಒ ಅಧಿಕಾರಿಗಳು ಪಟ್ನಾ ಜಿಲ್ಲೆಯ ಜಿಲ್ಲಾಧಿಕಾರಿ ಅವರ ಜತೆ, ನಗರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮತ್ತು ನಗರದಿಂದ 35 ಕಿ.ಮೀ ದೂರದಲ್ಲಿರುವ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು