ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಬುಧವಾರ ಮುಂಜಾನೆ 5.19 ಗಂಟೆಗೆ ಭೂಕಂಪ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿಕಂಪನದ ತೀವ್ರತೆ 4.4 ರಷ್ಟಿತ್ತು.ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ದ್ವೀಪಸಮೂಹದ ರಾಜಧಾನಿ ಪೋರ್ಟ್ ಬ್ಲೇರ್ನಿಂದ ಸುಮಾರು 71 ಕಿ.ಮೀ ದೂರದ ಪೂರ್ವದಿಕ್ಕಿನಲ್ಲಿ 150 ಕಿ.ಮೀ ಆಳದಲ್ಲಿ ಕಂಪನ ಕೇಂದ್ರವನ್ನು ಗುರುತಿಸಿರುವುದಾಗಿ ರಾಷ್ಟ್ರೀಯ ಭೂಕಂಪ ಅಧ್ಯಯನ ಕೇಂದ್ರ ತಿಳಿಸಿದೆ.

ಮಂಗಳವಾರ ಇಂಡೊನೇಷ್ಯಾದ ಜಾವಾದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಲ್ಲಿಯೂ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ.

ಅಂಡಮಾನ್ - ನಿಕೋಬಾರ್ ದ್ವೀಪ ಸಮೂಹದಲ್ಲಿ ವರ್ಷದಲ್ಲಿ ಹಲವು ಭಾರಿ ಭೂಮಿ ಕಂಪಿಸಿದೆ. ಕಳೆದ ತಿಂಗಳು 10ರಂದು ಭೂಮಿ ಕಂಪಿಸಿತ್ತು. 4.3 ತೀವ್ರತೆಯ ಭೂಕಂಪನ ಕೇಂದ್ರಬಿಂದು ಇಲ್ಲಿನ ದಿಗ್ಲಿಪುರದಲ್ಲಿತ್ತು.

ಈ ವರ್ಷದ ಜೂನ್ ಮತ್ತು ಜುಲೈ ತಿಂಗಳಲ್ಲಿ ಮೂರು ಬಾರಿ ರಾಜಧಾನಿ ದೆಹಲಿಯಲ್ಲೂ ಇದೇ ರೀತಿ ಭೂಮಿ ಕಂಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.