ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಡಾಖ್‌: ಕಾರ್ಗಿಲ್‌ ಗಡಿಯಲ್ಲಿ ಭೂಕಂಪ, 4.2 ರಷ್ಟು ತೀವ್ರತೆ

Last Updated 6 ಜುಲೈ 2020, 3:01 IST
ಅಕ್ಷರ ಗಾತ್ರ

ನವದೆಹಲಿ: ಲಡಾಖ್‌ನ ಕಾರ್ಗಿಲ್‌ನಲ್ಲಿ ಸೋಮವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ.

ಕಾರ್ಗಿಲ್‌ ಗಡಿಯಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಈ ಪ್ರಾಕೃತಿಕ ವಿದ್ಯಮಾನ, ಬೆಳಗ್ಗೆ 7 ಗಂಟೆಗೆ 150 ಕಿ.ಮೀ. ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಸಂಸ್ಥೆ ತಿಳಿಸಿದೆ.

ಕಳೆದ ಏಪ್ರಿಲ್‌ನಿಂದ ಲಡಾಖ್‌ ಗಡಿ, ಕಾಗಿರ್ಲ್‌ ಸೇರಿದಂತೆ ದೆಹಲಿಯಲ್ಲಿ ಹಲವು ಬಾರಿ ಲಘು ಭೂಕಂಪ ಸಂಭವಿಸಿದೆ ಎಂದು ಸಂಸ್ಥೆ ತಿಳಿಸಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT